ಬೆಂಗಳೂರು: ಕಳೆದ ಜೂನ್ ನಲ್ಲಿ ತೆರೆಕಂಡ ಉಪೇಂದ್ರ ಅಭಿನಯದ ಐ ಲವ್ ಯೂ ಚಿತ್ರಕ್ಕೆ ನಿರ್ದೇಶಕ ಆರ್.ಚಂದ್ರು ಅವರಿಗೆ ಪ್ರಶಸ್ತಿ ಒಲಿದಿದೆ. ಕರ್ನಾಟಕ ಚಿತ್ರರಸಿಕರ ಸಂಘ ಕೊಡುವ ವರ್ಷದ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಗೆ ಆರ್. ಚಂದ್ರು ಭಾಜನರಾಗಿದ್ದಾರೆ.

ಉಪೇಂದ್ರ, ಸೋನುಗೌಡ ಮತ್ತು ರಚಿತಾ ರಾಮ್ ತಾರಾಗಣವಿರುವ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದರು. ಪ್ರಶಸ್ತಿ ಪ್ರದಾನ ಸಮಾರಂಭ ಮುಂದಿನ ತಿಂಗಳು 8ರಂದು ಭಾರತೀಯ ವಿದ್ಯಾಭವನದಲ್ಲಿ ನಡೆಯಲಿದೆ. ಕರ್ನಾಟಕ ಚಿತ್ರರಸಿಕರ ಸಂಘ ಚಿತ್ರರಂಗದಲ್ಲಿ ಸೇವೆ ಸಲ್ಲಿಸುವ ಖ್ಯಾತರಿಗೆ ಪ್ರತಿ ವರ್ಷ ಪ್ರಶಸ್ತಿ ನೀಡಿ ಗೌರವಿಸುತ್ತದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.