ಪಟನಾ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಭಾರತ ಸರ್ಕಾರ ರದ್ದುಗೊಳಿಸಿದ ನಂತರ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಮತ್ತು ಅವರ ಸಚಿವ ಸಂಪುಟದ ಸದಸ್ಯರು ಯುದ್ಧದ ಕುರಿತು ನಿರಂತರವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ

1965 ಮತ್ತು 1971ರಲ್ಲಿ ಮಾಡಿದ ತಪ್ಪುಗಳನ್ನು ಮತ್ತೊಮ್ಮೆ ಮಾಡದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬಿಹಾರದ ಪಟನಾದಲ್ಲಿ ಬಿಜೆಪಿ ಆಯೋಜಿಸಿದ್ದ ಜನ ಜಾಗರಣ ಸಭಾದಲ್ಲಿ ಮಾನತಾಡಿದ ಅವರು, ಪಾಕಿಸ್ತಾನ 1965 ಮತ್ತು 1971ರಲ್ಲಿ ಮಾಡಿದ ತಪ್ಪುಗಳನ್ನು ಮರುಕಳಿಸಿದರೆ, ಪಾಕ್​ ಆಕ್ರಮಿತ ಕಾಶ್ಮೀರದ ಗತಿ ಏನಾಗಲಿದೆ ಎಂಬುದನ್ನು ಯೋಚಿಸಬೇಕು. ಪಾಕ್​ನ ಬಲೂಚಿಸ್ತಾನ ಮತ್ತು ಪಶ್ತೂನ್​ನಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ನಿಲ್ಲದಿದ್ದರೆ ಪಾಕಿಸ್ತಾನ ವಿಭಜನೆಯಾಗುವುದನ್ನು ಯಾವುದೇ ಶಕ್ತಿಯಿಂದ ತಡೆಯಲು ಸಾಧ್ಯವಿಲ್ಲ ಎಂದು ಪಾಕ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.