ಬೆಂಗಳೂರು: ಅತೃಪ್ತ ಶಾಸಕರ ರಾಜಕೀಯ ಪ್ರಸಂಗ ಮುಂದುವರಿದಿದ್ದು ಇದೀಗ ಮಾಧ್ಯಮದ ಪ್ರಶ್ನೆಗೆ ಉತ್ತರರಿಸಿರುವ ರಾಮಲಿಂಗಾ ರೆಡ್ಡಿ ರಾಜೀನಾಮೆ ಪಡೆಯಲು ಬಿಜೆಪಿಯಿಂದ ಯಾವುದೇ ಒತ್ತಡವಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಶಾಸಕ ಸ್ಥಾನಕ್ಕೆ ತಾವು ಕೊಟ್ಟಿರುವ ರಾಜೀನಾಮೆಯನ್ನು ಹಿಂಪಡೆಯಲು ಬಿಜೆಪಿಯಿಂದ ಯಾವುದೇ ಒತ್ತಡ ಬಂದಿಲ್ಲ. ಆದರೂ, ಅದನ್ನು ವಾಪಸು ಪಡೆಯುವುದೋ ಅಥವಾ ಬೇಡವೋ ಎಂಬ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಬಿ. ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಕುರಿತು ನಿರ್ಧರಿಸಲು ತಮ್ಮ ಪುತ್ರಿ ಸೌಮ್ಯಾ ರೆಡ್ಡಿ ಸ್ವತಂತ್ರರು ಎಂದು ಪುನರುಚ್ಚರಿಸಿದರು.

ನನಗೆ ಎಲ್ಲ ಪಕ್ಷಗಳಲ್ಲೂ ಸ್ನೇಹಿತರಿದ್ದಾರೆ. ಯಾವುದೇ ಕೆಲಸದ ನಿಮಿತ್ತ ಅವರೆಲ್ಲರೂ ಬಂದು ನನ್ನನ್ನು ಭೇಟಿಯಾಗುತ್ತಿರುತ್ತಾರೆ. ಅದೇ ರೀತಿ ಬಿಜೆಪಿಯವರು ಬಂದು ಹೋಗುತ್ತಿರುತ್ತಾರೆ. ಹಾಗೆಂದ ಮಾತ್ರಕ್ಕೆ ಶಾಸಕ ಸ್ಥಾನಕ್ಕೆ ಕೊಟ್ಟಿರುವ ರಾಜೀನಾಮೆಯನ್ನು ಹಿಂಪಡೆಯದಂತೆ ಬಿಜೆಪಿಯವರು ಒತ್ತಡ ಹೇರುತ್ತಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದು ಸ್ಪಷ್ಟಪಡಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.