ಬೆಂಗಳೂರು: ನಾಳೆ ಖ್ಯಾತ ಪತ್ರಕರ್ತ ರವೀಶ್ ಕುಮಾರ್ ಅವರು ಗೌರಿ ಲಂಕೇಶ್ ಸ್ಮರಣಾರ್ಥ ಪ್ರಶಸ್ತಿ ಸ್ವೀಕರಿಸಲು ಬೆಂಗಳೂರಿಗೆ ಆಗಮಿಸಲಿದ್ದಾರೆ.

NDTV ಹಿಂದಿಯ ವ್ಯವಸ್ಥಾಪಕ, ಸಂಪಾದಕರಾದ ರವೀಶ್ ಕುಮಾರ್ ರವರಿಗೆ “ಗೌರಿ ಲಂಕೇಶ್ ರಾಷ್ಟ್ರೀಯ ಪತ್ರಿಕೋದ್ಯಮ ಪ್ರಶಸ್ತಿ” ಸ್ವೀಕರಿಸಲಿದ್ದಾರೆ.

ಗೌರಿ ಸ್ಮಾರಕ ಟ್ರಸ್ಟ್ ವತಿಯಿಂದ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಪ್ರಶಸ್ತಿಯು ಗೌರವ ಫಲಕ ಮತ್ತು ಒಂದು ಲಕ್ಷ ರೂ.ಗಳ ಸನ್ಮಾನ ಧನವನ್ನು ಒಳಗೊಂಡಿರುತ್ತದೆ.

ರವೀಶ್ ಕುಮಾರ್ ಅವರು ತಮ್ಮ ಹರಿತವಾದ ಸುದ್ದಿ ವಿಶ್ಲೇಷಣೆಗೆ ಮತ್ತು ರಾಜಿ ಇಲ್ಲದ ಸೆಕ್ಯುಲರ್ ನಿಲುವಿಗೆ ಬದ್ಧರಾಗಿದ್ದಾರಷ್ಟೇ ಅಲ್ಲದೆ ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ತಮ್ಮ ವೃತ್ತಿ ಘನತೆಯನ್ನು ಎತ್ತಿಹಿಡಿಯುತ್ತಾ, ಪ್ರಜಾತಾಂತ್ರಿಕ ನಿಲುವಿಗೆ ಅಚಲವಾದ ನಿಷ್ಠಯನ್ನು ತೋರುತ್ತಾ ಬಂದಿದ್ದಾರೆ. ಇಂಥವರು ಗೌರಿ ಪ್ರಶಸ್ತಿಯ ಮೊದಲ ಪುರಸ್ಕೃತರು ಎಂಬುದು ನಮಗೆಲ್ಲಾ ಹೆಮ್ಮೆಯ ವಿಷಯ ಎಂದು ಗೌರಿ ಸ್ಮಾರಕ ಟ್ರಸ್ಟಿನ ಅಧ್ಯಕ್ಷರಾದ ಎಚ್.ಎಸ್ ದೊರೆಸ್ವಾಮಿಯವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್ 22ರ ಭಾನುವಾರ ಸಂಜೆ 4 ಗಂಟೆಗೆ ನಗರದ ಸೇಂಟ್ ಜೋಸೆಫ್ ಕಾಲೇಜ್ ಆಡಿಟೋರಿಯಂ, ಲ್ಯಾಂಗ್‍ಫೋರ್ಡ್ ರಸ್ತೆ, ರಿಚ್‍ಮಂಡ್ ಸರ್ಕಲ್ ಹತ್ತಿರ, ನಡೆಯಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.