ಬೆಂಗಳೂರು: ಭಾರಿ ಮಳೆಯಿಂದ ಜನರ ಜೀವನವೇ ನಲುಗಿ ಹೋಗಿದೆ.ಅಲ್ಲಲ್ಲಿ ಗುಡ್ಡ ಕುಸಿತ ನೆರೆ ಹಾವಳಿ ಉಂಟಾಗಿದ್ದು, ಸಾಕಷ್ಟು ಅಸ್ತಿ ಪಾಸ್ತಿ ನಷ್ಟವಾಗಿದೆ. ಇದರಿಂದ ಕಂಗೆಟ್ಟದ್ದ ಜನತೆ ಎರಡು ದಿನಗಳ ಕಾಲ ಮಳೆ ಕಡಿಮೆಯಾಗಿದ್ದನ್ನು ಕಂಡು ನಿರಾಳರಾಗಿದ್ದರು. ಇದೀಗ ಮತ್ತೆ 6 ಜಿಲ್ಲೆ ಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಮಲೆನಾಡು, ಕರಾವಳಿ ಭಾಗದ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಂಗಳೂರು, ಶಿವಮೊಗ್ಗ, ಉಡುಪಿ, ಕೊಡಗು, ದಕ್ಷಿಣ ಕನ್ನಡ,ಉತ್ತರ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಭಾರೀ ಮಳೆಯಿಂದಾಗಿ ಗುಡ್ಡ ಕುಸಿತ,ಉಂಟಾಗುತ್ತಿದೆ. ಹೀಗಾಗಿ ಬೆಟ್ಟ, ಗುಡ್ಡಗಳ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸುತ್ತಮುತ್ತಲಿನ ಜನರು ಸ್ಥಳಾಂತರಗೊಳ್ಳುವಂತೆ ಜಿಲ್ಲಾಡಳಿತ ಸೂಚಿಸಿದೆ.ಉತ್ತರ ಕರ್ನಾಟಕ ಮೂರು ಜಿಲ್ಲೆಗಳು ಸೇರಿದಂತೆ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.