ಬೆಂಗಳೂರು : ಬೆಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಕರ್ನಾಟಕದಲ್ಲಿ ಈಗಾಗಲೇ ಭಾರಿ ಮಳೆಯಿಂದ ಜನರು ನಲುಗಿ ಹೋಗಿದ್ದಾರೆ. ಪ್ರವಾಹದಿಂದ ಎಲ್ಲೆಲ್ಲೂ ನೆರೆ ಆವರಿಸಿದೆ.ಕೆಲವು ಕಡೆ ಸಾವು ನೋವು ಸಂಭವಿಸಿದೆ.ಇದೀಗ ಬೆಂಗಳೂರಿನಲ್ಲೂ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಎಡೆ ಬಿಡದೆ ಮಳೆಯಾಗುತ್ತಿರುವುದರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಪ್ರವಾಹ ಎಚ್ಚರಿಕೆ ನೀಡಿದೆ. ಜೊತೆಗೆ ಭಾರಿ ಮಳೆಯಾಗಿ ಪ್ರವಾಹ ಉಂಟಾಗಬಹುದಾದ ಪರಿಸ್ಥಿತಿ ಎದುರಾಗಿದೆ ಎಂದು ಹಮಾಮಾನ ಇಲಾಖೆ ವರದಿ ನೀಡಿದೆ.ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇದೆ ಎಂದು 80 ಸ್ಥಳಗಳಿಗೆ ಮಾಹಿತಿ ನೀಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.