ಹಾಸನ: ನಗರದ ಬಿಎಂ ರಸ್ತೆಯಲ್ಲಿ ಕೆಲವು ಕಟ್ಟಡಗಳಿಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರೂ ಜಿಲ್ಲಾಡಳಿತ ಕಟ್ಟಡಗಳನ್ನು ತೆರವುಗೊಳಿಸಿದ ಹಿನ್ನಲೆಯಲ್ಲಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಹೈಕೋರ್ಟ್ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ನೋಟಿಸ್ ಜಾರಿ ಮಾಡಿದೆ. ಬಿಎಂ ರಸ್ತೆ ಅಗಲೀಕರಣ ವಿಚಾರವಾಗಿ ಕಾನೂನು ಉಲ್ಲಂಘನೆ ಹಿನ್ನೆಲೆಯಲ್ಲಿ ಈ ನೋಟಿಸ್ ಜಾರಿ ಮಾಡಿದ್ದು  ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಿದೆ.

ಸುಧಾ ಮತ್ತು ಶಶಿಕಾಂತ್ ಎಂಬವರು ಹೈಕೋರ್ಟ್ ನಲ್ಲಿ ಕೇಸ್ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರವಿಮಳಿಮಠ್ ಮತ್ತು ಬಿ.ಎಂ. ಶ್ಯಾಮ್ ಪ್ರಸಾದ್‍ರ ವಿಭಾಗೀಯ ಪೀಠದಿಂದ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.