ಮಂಗಳೂರು:ಮಂಗಳೂರು ಬಂದರಿಗೆ ವಿದೇಶಗಳಿಂದ ಸಾಕಷ್ಟು ತೈಲ ಹೊತ್ತ ನೌಕೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಯಾವುದೇ ರೀತಿಯ ತೈಲ ಸೋರಿಕೆಯಾದರೆ, ಅದರ ನಿರ್ವಹಣೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ನಿರಂತರವಾಗಿಡುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚಿಸಿದ್ದಾರೆ.

ಮಂಗಳವಾರ ಕೋಸ್ಟ್ ಗಾರ್ಡ್ ವತಿಯಿಂದ ಪಣಂಬೂರು ಕೋಸ್ಟ್ ಗಾರ್ಡ್ ಕಚೇರಿಯಲ್ಲಿ ಮಾತನಾಡಿದ ಅವರು ” ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿಯೂ ಪ್ರಾಕೃತಿಕ ಹಾಗೂ ಮಾನವ ನಿರ್ಮಿತ ವಿಪತ್ತುಗಳನ್ನು ನಿರ್ವಹಿಸಲು ಜಿಲ್ಲಾಡಳಿತವು ನಿರಂತರ ಕ್ರಮಗಳನ್ನು ನಡೆಸಲಿದೆ ಇತ್ತೀಚಿನ ದಿನಗಳಲ್ಲಿ ಸಮುದ್ರ ಮಧ್ಯದಲ್ಲಿಯೇ ನೌಕೆ, ಬೋಟುಗಳು ತಾಂತ್ರಿಕ ಸಮಸ್ಯೆಗಳಿಂದ ಅಥವಾ ಪ್ರಾಕೃತಿಕ ಕಾರಣಗಳಿಂದ ಸಂಚಾರ ನಿಂತು ಶಾಶ್ವತವಾಗಿ ಅಲ್ಲಿಯೇ ಮುಳುಗಿ ಹೋಗುವ ಪ್ರಕರಣಗಳು ಜಿಲ್ಲೆಯಲ್ಲಿ ವರದಿಯಾಗುತ್ತಿವೆ. ಈ ನಿಟ್ಟಿನಲ್ಲಿ ಇಂತಹ ಪ್ರಕರಣಗಳನ್ನು ಶಾಸನಬದ್ಧವಾಗಿ ನಿರ್ವಹಿಸಲು ನಿಯಮ ಜಾರಿಗೆ ತರಬೇಕಾದ ಅಗತ್ಯವಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.