ಮಂಗಳೂರು: ದೇಶದಲ್ಲಿ ಸ್ಥಗಿತಗೊಂಡಿರುವ ನಾಲ್ಕು ಬೃಹತ್ ರಸಗೊಬ್ಬರ ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸಲು 14 ಸಾವಿರ ಕೋಟಿ ರೂ. ಅನುದಾನ ನೀಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ 2002ರಿಂದ 20014ರ ಅವಧಿಯಲ್ಲಿ ನಾಲ್ಕು ಬೃಹತ್ ರಸಗೊಬ್ಬರ ಘಟಕಗಳು ಮುಚ್ಚಿವೆ. ಈಗಾಗಲೇ ದೇಶದ ಅಗತ್ಯದ ಶೇ.80ರಷ್ಟು ರಸಗೊಬ್ಬರವನ್ನು ನಾವೇ ಉತ್ಪಾದಿಸುತ್ತಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರ ಮೇಕ್ ಇನ್ ಇಂಡಿಯಾ ಯೋಜನೆಯನ್ವಯ ನಮ್ಮ ದೇಶಕ್ಕೆ ಅಗತ್ಯವಿರುವ ಎಲ್ಲ್ಲ ರಸಗೊಬ್ಬರವನ್ನು ನಾವೇ ಉತ್ಪಾದನೆ ಮಾಡಬೇಕು ಎನ್ನುವ ನೆಲೆಯಲ್ಲಿ ಸ್ಥಗಿತಗೊಂಡಿರುವ ಈ ನಾಲ್ಕು ರಸಗೊಬ್ಬರ ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದರು.

ದೇಶದ ಜನೌಷಧಿ ಕೇಂದ್ರಗಳಲ್ಲಿ ಇನ್ನಷ್ಟು ಔಷಧಿಗಳನ್ನು ಸೇರ್ಪಡೆಗೊಳಿಸಲು ನಿರ್ಧರಿಸಲಾಗಿದೆ. ಇದರಿಂದ ಮಿತದರದಲ್ಲಿ ಲಭಿಸುವ ಔಷಧಗಳ ಪ್ರಮಾಣ ಇನ್ನೂ ಹೆಚ್ಚಾಗಲಿದೆ ಎಂದು ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

ರಾಜ್ಯದಲ್ಲಿ ನೆರೆ ಸಂತ್ರಸ್ತರಿಗೆ ನೆರವು ನೀಡುವುದು ಕೇಂದ್ರ ಮತ್ತು ರಾಜ್ಯ ಸರಕಾರಗಳ ಹೊಣೆಗಾರಿಕೆಯಾಗಿದೆ. ಕೇಂದ್ರ ಸರಕಾರ ನೆರೆಪೀಡಿತರ ಜೊತೆ ಸದಾ ಇರುವುದಾಗಿ ಡಿ.ವಿ.ಸದಾನಂದ ಗೌಡ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.