ತೋನ್ಸೆ – ಹೂಡೆಯ ಅರಬ್ಬಿ ಸಮುದ್ರದ ಕಡಲ ತೀರದಲ್ಲಿನ ಮಹಮ್ಮದೀಯ ಎಜುಕೇಶನಲ್ ಟ್ರಸ್ಟ್ (ರಿ) ನ ಆಶ್ರಯದಲ್ಲಿ ನಡೆಯುತ್ತಿರುವ ಸಾಲಿಹಾತ್ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಿಗೆ ಪ್ರವೇಶಾತಿ ಆರಂಭಗೊಂಡಿದೆ. ಅದೇ ರೀತಿಯಾಗಿ ಸಾಲಿಹಾತ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಕಾಂ ಹಾಗೂ ಬಿ.ಎ ತರಗತಿಗಳಿಗೆ ದಾಖಲಾತಿ ಆರಂಭಗೊಂಡಿದೆ.

ಈ ಶಿಕ್ಷಣ ಸಂಸ್ಥೆಯೊಂದಿಗೆ ನರ್ಸರಿ, ಎಲ್.ಕೆ.ಜಿ.ಯಿಂದ ಹಿಡಿದು 10ನೇ ತರಗತಿಯವರೆಗೆ ಸಾಲಿಹಾತ್ ಆಂಗ್ಲ ಮಾಧ್ಯಮ ಶಾಲೆ ನಡೆಯುತ್ತಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ ಹಾಗೂ ಪದವಿ ತರಗತಿಗಳಲ್ಲಿ ಉತ್ತಮ ಫಲಿತಾಂಶ ದಾಖಲಿಸಿದೆ. ವಿಶೇಷವಾಗಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವ ಈ ಸಾಲಿಹಾತ್ ಕಾಲೇಜ್, ಗುಣಮಟ್ಟದ ಶಿಕ್ಷಣಕ್ಕಾಗಿ ಪ್ರಯತ್ನಿಸುತ್ತಿದೆ. ಉತ್ತಮ ಗ್ರಂಥಾಲಯ, ವಿಶಾಲವಾದ ಆಟದ ಮೈದಾನ, ಸುಸಜ್ಜಿತ ಕಟ್ಟಡ, ಸಭಾಂಗಣ, ಕಂಪ್ಯೂಟರ್ ಕೊಠಡಿ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಹೊಂದಿದೆ. ದೂರದ ಸಾಸ್ತಾನ ಹಾಗೂ ಉದ್ಯಾವರದಿಂದ ಮಕ್ಕಳನ್ನು ಕರೆತರಲು ಶಾಲಾ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ.

ಎಲ್ಲಾ ತರಗತಿ ಕೋಣೆಗಳಿಗೆ ಸಿ.ಸಿ. ಕ್ಯಾಮರಾ ಅಳವಡಿಸಲಾಗಿದೆ. ಅನುಭವಿ ಶಿಕ್ಷಕ ವೃಂದವನ್ನು ಹೊಂದಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಇವರ ಪಾತ್ರ ಗಮನಾರ್ಹವಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದ್ದು, ವ್ಯಕ್ತಿತ್ವ ವಿಕಸನದಂತಹ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗುತ್ತಿದೆ. ವಿಶೇಷವಾಗಿ ಮಕ್ಕಳಿಗೆ ನೈತಿಕ ಶಿಕ್ಷಣವನ್ನು ನೀಡಲಾಗುತ್ತಿದ್ದು, ಮಕ್ಕಳು ಸುಸಂಸ್ಕೃತ ನಾಗರೀಕರಾಗುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಸಾಗುತ್ತಿದೆ. ವಿದ್ಯಾರ್ಥಿಗಳಿಗೆ ಸರ್ಕಾರದಿಂದ ದೊರೆಯುವ ವಿದ್ಯಾರ್ಥಿವೇತನದ ಸೌಲಭ್ಯವನ್ನು ದೊರಕಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗುತ್ತಿದೆ. ಒಟ್ಟಿನಲ್ಲಿ ಶಿಕ್ಷಣವನ್ನು ವ್ಯವಹಾರ ದೃಷ್ಟಿಯಿಂದ ನೋಡದೆ ಸೇವೆಯ ರೂಪದಲ್ಲಿ ನೀಡುತ್ತಿರುವುದು ಈ ಸಾಲಿಹಾತ್ ಶಿಕ್ಷಣ ಸಂಸ್ಥೆಯ ವಿಶೇಷವಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.