ಉಡುಪಿ : ತೋನ್ಸೆ ಹೂಡೆಯ ಸಾಲಿಹಾತ್ ಶಾಲೆಯಲ್ಲಿ ಬ್ಯಾಗ್ ರಹಿತ ದಿನಾಚರಣೆಯನ್ನು ಅಚರಿಸಲಾಯಿತು. ಪ್ರೌಢಶಾಲೆಯ ವಿಧ್ಯಾರ್ಥಿಗಳು ಕೆಮ್ಮಣ್ಣು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ವ್ಯವಸ್ಥೆಯ ಕುರಿತು ಮಾಹಿತಿ ಪಡೆದುಕೊಂಡರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಫೌಝಿಯಾ ಸಾಧಿಕ್ ಸದಸ್ಯರು ಹಾಗೂ ಸಿಬ್ಬಂದಿಗಳು ಮಾಹಿತಿ ನೀಡಿದರು ಪ್ರಾಥಮಿಕ ಶಾಲೆಯ ವಿಭಾಗದಲ್ಲಿ ಚಿತ್ರಕಲೆ, ಕ್ವಿಝ್ ವಿಜ್ಙಾನ ಮಾದರಿ ಇತ್ಯಾದಿ ವಿಷಯಗಳಲ್ಲಿ ಚಟುವಟಿಕೆ ನಡೆಸಲಾಯಿತು. ಸಂಸ್ಥೆಯ ಆಡಾಳಿತಾಧಿಕಾರಿ ಅಸ್ಲಂ ಹೈಕಾಡಿ, ಮುಖ್ಯ ಶಿಕ್ಷಕಿಯಾದ ಶ್ರೀಮತಿ ಸುನಂದಾ, ಲವಿನ ಕ್ಲಾರ, ಸಮೀನ ಶುಕೂರ್ ಹಾಗೂ ಸಹ ಶಿಕ್ಷಕಿಯರ ಮಾರ್ಗದರ್ಶನದಲ್ಲಿ ಬ್ಯಾಗ್ ರಹಿತ ದಿನಾಚರಣೆ ಯಶಸ್ವಿಯಾಗಿ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.