ಬೀದರ್​ ಶಾಹೀನ್​ ಶಾಲೆ ಪ್ರಕರಣ; ಸಿಎಂ ಮನೆಗೆ ಮುತ್ತಿಗೆ ಹಾಕಲು ಮುಂದಾದ ಕಾಂಗ್ರೆಸ್​ ನಾಯಕರು

0
63

ಬೆಂಗಳೂರು: ಬೀದರ್​ನ ಶಾಹೀನ್ ಶಾಲೆಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್​ ನಾಯಕರು ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ.

ಇಂದು ಕಾಂಗ್ರೆಸ್​ ನಾಯಕ ದಿನೇಶ್​ ಗುಂಡೂರಾವ್​ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.ಮೌರ್ಯ ವೃತ್ತದ ಗಾಂಧಿ ಪ್ರತಿಮೆಯಿಂದ ಮಧ್ಯಾಹ್ನ 11 ಗಂಟೆಗೆ ಪ್ರತಿಭಟನೆ ಆರಂಭಗೊಳ್ಳಲಿದೆ.ನಂತರ ಸಿಎಂ ಗೃಹ ಕಚೇರಿ ಕೃಷ್ಣಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ.ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ಜಮೀರ್ ಅಹಮ್ಮದ್, ರಿಜ್ವಾನ್ ಅರ್ಷದ್, ರಾಮಲಿಂಗಾರೆಡ್ಡಿ, ವಿ ಎಸ್ ಉಗ್ತಪ್ಪ ಸೇರಿ ಇತರೆ ಮುಖಂಡರು ಭಾಗಿಯಾಗುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here