ರಾಜ್ಯಸಭಾ ಚುನಾವಣೆಯಲ್ಲಿ ಮೂರು ಸ್ಥಾನವೂ ಕಾಂಗ್ರೆಸ್‌ ಪಕ್ಷಕ್ಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ

ದಾವಣಗೆರೆ: ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಮೂರು ಸ್ಥಾನಗಳನ್ನೂ ನಾವೇ ಗೆಲ್ಲಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವಾಗಿ ಇದೇ 14ರಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಪ್ರತಿಭಟನೆ ಪ್ರಜಾಪ್ರಭುತ್ವದ ಜೀವಾಳ. ಸ್ವಾಮೀಜಿಗಳು ಅವರವರ ಅಭಿಪ್ರಾಯಗಳಿಗೆ ಸ್ವತಂತ್ರರು ಎಂದು ಅವರು ಹೇಳಿದರು.

ವಿಧಾನಸಭಾ ಸಚಿವಾಲಯಕ್ಕೆ ಸಿಬ್ಬಂದಿ ನೇಮಕ ಸರ್ಕಾರ ಮಾಡುವುದಲ್ಲ. ಅದು ನಮಗೆ ಸಂಬಂಧಿಸಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ಪೊಲೀಸ್ ಇಲಾಖೆ ಅಧಿಕಾರಿಗಳ ವರ್ಗಾವಣೆ ಆಡಳಿತ್ಮಾಕ ವಿಚಾರ. ಆ ಕುರಿತು ಬಹಿರಂಗವಾಗಿ ಚರ್ಚಿಸುವುದಿಲ್ಲ ಎಂದೂ ಸಿದ್ದರಾಮಯ್ಯ ಹೇಳಿದರು.