ಬೆಂಗಳೂರು, ಜು.29: ಯಡಿಯೂರಪ್ಪ ಉತ್ತಮ ಆಡಳಿತ ನೀಡುವುದಾಗಿ ಹೇಳಿದ್ದಾರೆ. ಅದನ್ನು ಸ್ವಾಗತಿಸುತ್ತೇನೆ. ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದಿದ್ದಾರೆ. ಅದನ್ನೂ ಸ್ವಾಗತಿಸುತ್ತೇನೆ. ಜನಸೇವೆ ಮಾಡಲು ಪ್ರಾಮಾಣಿಕವಾಗಿರಬೇಕು. ನನ್ನ ಅವಧಿಯಲ್ಲಿ ನಾನು ಆ ಪ್ರಯತ್ನ ಮಾಡಿದ್ದೇನೆ. ಕುಮಾರ ಸ್ವಾಮಿಯವರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿತ್ತು ಎಂಬ ಆರೋಪಗಳು ಸುಳ್ಳು. ಮೈತ್ರಿ ಸರಕಾರ ಉತ್ತಮವಾಗಿತ್ತು. ಕೆಲಸ ಮಾಡಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಯಡಿಯೂರಪ್ಪ ಜನಾದೇಶದಿಂದ ಮುಖ್ಯಮಂತ್ರಿಯಾಗಿಲ್ಲ. ಅವರು ಒಮ್ಮೆಯೂ ಜನಾದೇಶದಿಂದ ಮುಖ್ಯಮಂತ್ರಿಯಾಗಿಲ್ಲ. ಪ್ರತಿಬಾರಿಯೂ ಬಹುಮತದ ಕೊರತೆಯೊಂದಿಗೆ ಸರಕಾರ ರಚಿಸಿದ್ದಾರೆ. ನೀವು ಮುಖ್ಯಮಂತ್ರಿಯಾಗಿ ಹೆಚ್ಚು ದಿನ ಇರಬೇಕೆನ್ನುವುದು ನನ್ನ ಆಶಯ. ಅತೃಪ್ತರನ್ನು ಕಟ್ಟಿಕೊಂಡು ಸ್ಥಿರ ಸರಕಾರ ನೀಡಲು ಸಾಧ್ಯವೇ? ನೀವು ಬಹುದಿನ ಮುಖ್ಯಮಂತ್ರಿಯಾಗಿ ಇರುತ್ತೀರೆಂಬ ಖಾತ್ರಿ ನನಗಿಲ್ಲ. ಬಿಜೆಪಿಗೆ ಬಹುಮತವೇ ಇಲ್ಲ. ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ಅಧಿಕಾರಕ್ಕೇರಿರುವ ಬಿಜೆಪಿಯ ವಿಶ್ವಾಸ ಮತಕ್ಕೆ ನಾವು ಬೆಂಬಲ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.