ಬಿ ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರು ರಾಜ್ಯಕ್ಕೆ ದ್ರೋಹ ಎಸಗುತ್ತಿದ್ದಾರೆ – ಸಿದ್ದರಾಮಯ್ಯ

0
77

ಬೆಂಗಳೂರು :ಸಿದ್ದರಾಮಯ್ಯ ಅವರು “ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮಗಳಿಗೆ ಕೇಂದ್ರ ನೀಡಬೇಕಾಗಿದ್ದು ರೂ.5,335ಕೋಟಿ, ಬಿಡುಗಡೆಯಾಗಿದ್ದು ರೂ.911 ಕೋಟಿ ಮಾತ್ರ. ವಸತಿ,ಶಿಶುಕಲ್ಯಾಣ ಅಲ್ಪಸಂಖ್ಯಾತರ ಕಲ್ಯಾಣ ಸೇರಿದಂತೆ 24 ಇಲಾಖೆಗಳ ಕಾರ್ಯಕ್ರಮಗಳು ಹಣದ ಕೊರತೆಯಿಂದ ಸ್ಥಗಿತಗೊಂಡಿವೆ. ರಾಜ್ಯ ಬಿಜೆಪಿ ಸರ್ಕಾರ ದಿವಾಳಿಯಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಕೇಂದ್ರ ಪ್ರಾಯೋಜಿತ ಕಾರ್ಯಕ್ರಮಗಳ ಅನುದಾನ,ತೆರಿಗೆ ಪಾಲು ಮತ್ತು ಜಿಎಸ್ ಟಿ ಪರಿಹಾರ ಸೇರಿದಂತೆ ರೂ.73 ಸಾವಿರ ಕೋಟಿ ಹಣ ರಾಜ್ಯಕ್ಕೆ ಕೇಂದ್ರ ನೀಡಬೇಕಾಗಿದೆ ಎಂದಿದ್ದಾರೆ

ಈ ಬಾಕಿ ಹಣವನ್ನು ಕೇಳಲು ಅಸಮರ್ಥರಾಗಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾತಿಗೆ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡ್ತಿಲ್ಲ. ಅನುದಾನ ಕೋರಿ ಬೇಡಿಕೆ ಸಲ್ಲಿಸಲು ಅವಕಾಶ ನೀಡದೆ ಅವರು ಅವಮಾನಿಸುತ್ತಿದ್ದಾರೆ. ಯಡಿಯೂರಪ್ಪನವರ ಮೇಲಿನ ದ್ವೇಷಕ್ಕೆ ರಾಜ್ಯದ ಹಿತವನ್ನು ಕೇಂದ್ರ ಸರ್ಕಾರ ಬಲಿಕೊಡುತ್ತಿದೆ.ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರು ರಾಜ್ಯಕ್ಕೆ ದ್ರೋಹ ಎಸಗುತ್ತಿದ್ದಾರೆ.ಎಂದು ತಮ್ಮ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here