ನಿಷೇಧಾಜ್ಞೆ ಹೇರಿ ಬಿಸಿಯೂಟ ಕಾರ್ಯಕರ್ತೆಯರ ಶಾಂತಿಯುತ ಪ್ರತಿಭಟನೆಗೂ ಅವಕಾಶ ನೀಡದೆ ಕಿರುಕುಳ ನೀಡುತ್ತಿರುವುದು ಖಂಡನೀಯ – ಸಿದ್ದರಾಮಯ್ಯ

0
42

ಬೆಂಗಳೂರು :ನಿಷೇಧಾಜ್ಞೆ ಹೇರಿ ಬಿಸಿಯೂಟ ಕಾರ್ಯಕರ್ತೆಯರ ಶಾಂತಿಯುತ ಪ್ರತಿಭಟನೆಗೂ ಅವಕಾಶ ನೀಡದೆ ಕಿರುಕುಳ ನೀಡುತ್ತಿರುವುದು ಖಂಡನೀಯ ಜಿಲ್ಲಾ ಕೇಂದ್ರಗಳಲ್ಲಿಯೂ ಪೊಲೀಸರು ಕಾರ್ಯಕರ್ತೆಯರನ್ನು ಬೆದರಿಸುತ್ತಿರುವ ವರದಿಗಳು ಬರುತ್ತಿವೆ. ಬಿ ಎಸ್ ಯಡಿಯೂರಪ್ಪ ಅವರೇ, ರಾಜ್ಯದಲ್ಲಿರುವುದು ಚುನಾಯಿತ ಸರ್ಕಾರವೇ? ಸರ್ವಾಧಿಕಾರಿ ಆಡಳಿತವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರ ಇದ್ದಾಗ ಪ್ರತಿಭಟನಾ ನಿರತ ಬಿಸಿಯೂಟ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಿ‌ ಮಾಸಿಕ ರೂ.೫೦೦ ಗೌರವಧನ ಹೆಚ್ಚಿಸಿದ್ದೆ.ಪ್ರತಿಭಟನಕಾರರ ಮೇಲೆ ಪೊಲೀಸರನ್ನು ಛೂ ಬಿಟ್ಟಿರುವ ಈಗಿನ ಬಿ ಎಸ್ ಯಡಿಯೂರಪ್ಪ ಸರ್ಕಾರಕ್ಕೆ ಕನಿಷ್ಠ ಅವರ ಅಹವಾಲನ್ನು ಆಲಿಸುವ ಮನುಷ್ಯತ್ವವೂ ಇಲ್ಲ ಎಂದು ಸಿದ್ದರಾಮಯ್ಯ ತಮ್ಮ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here