ಹವಾಮಾನ ವೈಪರೀತ್ಯ: ದುಬೈ-ಮಂಗಳೂರು ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್!

0
99

ಮಂಗಳೂರು: ಕರಾವಳಿಯಲ್ಲಿ ಹವಾಮಾನ ವೈಪರೀತ್ಯದಿಂದಾಗಿ ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶನಿವಾರ ಮುಂಜಾನೆ ಬಂದಿಳಿಯಬೇಕಾಗಿದ್ದ ಸ್ಪೈಸ್ ಜೆಟ್ ವಿಮಾನ ಮಾರ್ಗ ಬದಲಿಸಿ ಬೆಂಗಳೂರಿನಲ್ಲಿ ಲ್ಯಾಂಡ್ ಆಗಿದೆ.

ದಮ್ಮಾಮ್ ಮತ್ತು ದುಬೈ ನಿಂದ ಬಂದಿದ್ದ ಏರ್ ಇಂಡಿಯಾ ವಿಮಾನ ಮುಂಜಾವು 4:30ಕ್ಕೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದ್ದು, ಆದರೆ 8:30 ಕ್ಕೆ ಬಂದಿದ್ದ ಮತ್ತೊಂದು ವಿಮಾನ ನೇರವಾಗಿ ಬೆಂಗಳೂರಿನಲ್ಲಿ ಇಳಿದಿದೆ.

ಬೆಂಗಳೂರಿನಿಂದ ಬೆಳಗ್ಗೆ 8:00 ಗಂಟೆಗೆ ಹೊರಟಿದ್ದ ಸ್ಪೈಸ್ ಜೆಟ್, ಇಂಡಿಗೋ ವಿಮಾನಗಳು ಮಂಗಳೂರಿನಲ್ಲಿ ಮಬ್ಬು ಕವಿದ ವಾತಾವರಣವಿದ್ದರಿಂದ ಮರಳಿ ಬೆಂಗಳೂರಿಗೆ ವಾಪಸ್ಸಾಗಿದೆ ಎಂದು ವರದಿಯಾಗಿದೆ.

ಹೈದರಬಾದ್ ನಿಂದ ಬಂದಿದ್ದ ಮತ್ತೊಂದು ವಿಮಾನಕ್ಕೂ ಹವಮಾನ ವೈಪರಿತ್ಯ ಹಿನ್ನಲೆಯಲ್ಲಿ ಲ್ಯಾಂಡ್ ಆಗಲು ಅನುಮತಿ ದೊರೆತಿಲ್ಲ.

LEAVE A REPLY

Please enter your comment!
Please enter your name here