ಕೊಲಂಬೋ: ಶ್ರೀಲಂಕಾದಲ್ಲಿ ಚರ್ಚ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ನಂತರ ಮುಸ್ಲಿಂ ವಿರೋಧಿ ಹಿಂಸಾಚಾರ ತಾರಕಕ್ಕೇರಿದೆ. ಉಗ್ರರ ಕೃತ್ಯಕ್ಕೆ ಪ್ರತಿಯಾಗಿ ಮುಸ್ಲಿಂ ಸಮುದಾಯವನ್ನು ಟಾರ್ಗೆಟ್ ಮಾಡಿ ಮಸೀದಿಗಳು ಹಾಗೂ ಮುಸ್ಲಿಮರ ಉದ್ದಿಮೆಗಳನ್ನು ಧ್ವಂಸಗೊಳಿಸಲಾಗುತ್ತಿದೆ. ಈ ಘಟನೆಗಳಿಂದಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ ಎಂದು ಮುಸ್ಲಿಂ ಕೌನ್ಸಿಲ್ ಆಫ್ ಶ್ರೀಲಂಕಾ ಹೇಳಿದೆ.

ಇದೇ ವೇಳೆ ಮುಸ್ಲಿಮರನ್ನು ಗುರಿಯಾಗಿರಿಸಿಕೊಂಡು ನಡೆಸಲಾಗುತ್ತಿರುವ ದಾಳಿಯನ್ನು ತಡೆಗಟ್ಟುವುದಕ್ಕೆ ಸರ್ಕಾರ ಕ್ರಮ ಕೈಗೊಂಡಿದ್ದು, ಫೇಸ್ ಬುಕ್, ವಾಟ್ಸ್ ಆಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ತಾತ್ಕಾಲಿಕವಾಗಿ ನಿಷೇಧ ಹೇರಿ ಆದೇಶ ಹೊರಡಿಸಿದೆ.

ಫೇಸ್ ಬುಕ್ ನಲ್ಲಿ ಪ್ರಾರಂಭವಾದ ವಾಗ್ವಾದ ಕೊನೆಗೆ ಮಸೀದಿ ಹಾಗೂ ಮುಸ್ಲಿಂ ಮಾಲಿಕತ್ವದ ಅಂಗಡಿಗಳ ಮೇಲೆ ಕಲ್ಲು ತೂರಾಟ, ಮುಸ್ಲಿರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ವರದಿಯಾಗಿದೆ.

ಇದರಿಂದಾಗಿ ಎಚ್ಚೆತ್ತುಕೊಂಡಿರುವ ಸರ್ಕಾರ ಸಾಮಾಜಿಕ ಜಾಲತಾಣಗಳಿಗೆ ತಾತ್ಕಾಲಿಕ ನಿಷೇಧ ವಿಧಿಸಿದೆ.

1 COMMENT

  1. ಯೂಟ್ಯೂಬ್ ನೋಡಿ ದೀನ್ ಕಲಿತ ನಾಮದಾರಿ ಜನರಿಂದ ಬಾಂಬ್ ಇಟ್ಟು.
    ನಿಜವಾದ ಅರ್ಥದಲ್ಲಿ ದೀನ್ ಕಲಿತು ಅದರ ಪ್ರಕಾರ ಜೀವಿಸುತ್ತಿರುವ ಮುಸ್ಲಿಮರ ಜೀವನ ಕಷ್ಟದಲ್ಲಿದೆ ಅಲ್ಲಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.