ಕಾಕಿನಾಡ: ಸಮಾಜ ಕಲ್ಯಾಣ ಇಲಾಖೆ ಸಚಿವ ಪಿನಿಪೆ ವಿಶ್ವರೂಪ ಅವರ ನಿವಾಸದ ಹೊರಗೆ 25 ವರ್ಷದ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಎರಡು ಮಕ್ಕಳ ತಾಯಿಯಾಗಿದ್ದು ಅತ್ತೆ -ಮಾವನಿಂದ ನಿರಂತರವಾಗಿ ಕಿರುಕುಳಕ್ಕೀಡಾಗುತ್ತಿದ್ದರಿಂದ ಬೇಸತ್ತು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ . ಮಹಿಳೆ ಅಮಲಾಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಎಷ್ಟೇ ಬಾರಿ ಬುದ್ದಿವಾದ ಹೇಳಿದರೂ ತಮ್ಮ ಅತ್ತೆ-ಮಾವ ಕಿರುಕುಳ ನೀಡುವುದನ್ನು ನಿಲ್ಲಿಸಿರಲಿಲ್ಲ. ಈ ಹಿಂದೆ ಕೂಡ ಸಚಿವರು ಮತ್ತು ಪೊಲೀಸರಿಗೆ ದೂರು ನೀಡಿ ಅತ್ತೆ-ಮಾವನ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಬೇಸತ್ತು ನಿನ್ನೆ ಈ ಕೃತ್ಯಕ್ಕೆ ಇಳಿದಿದ್ದಾರೆ.


LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.