ಚಾಮರಾಜನಗರ: ಒಂದೇ ಕುಟುಂಬದ ಐವರು ಸಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇವರ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟನಾ ಸ್ಥಳಕ್ಕೆ ವಿಧಿ ವಿಜ್ಞಾನ ತಜ್ಞರು ಭೇಟಿ ನೀಡಿದ್ದಾರೆ. ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಡಿ ಆನಂದ ಕುಮಾರ್ ಸ್ಥಳದಲ್ಲಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಮೃತರನ್ನು ಓಂಪ್ರಕಾಶ್,ನಿಕಿತಾ,ಆರ್ಯಕೃಷ್ಣ, ನಾಗರಾಜಾಚಾರ್ಯ,ಹಾಗೂ ಹೇಮರಾಜು ಎಂದು ಗುರುತಿಸಲಾಗಿದೆ.ಹಾಗೂ ಇವರು ಮೂಲತಃ ತುಮಕೂರಿನವರಾಗಿದ್ದು,ಮೈಸೂರಿನಲ್ಲಿ ವಾಸವಿದ್ದರು.ನೆನ್ನೆ ಗುಂಡ್ಲುಪೇಟೆ ಪಟ್ಟಣದ ಗ್ರೀನ್ ವ್ಯಾಲಿ ಲಾಡ್ಜ್ ನಲ್ಲಿ ರೂಂ ಮಾಡಿಕೊಂಡಿದ್ದಾರೆ.ಇಂದು ಐವರು ಇಂದು ಬೆಳಗ್ಗಿನ ಜಾವ ಆತ್ಮಹತ್ಯೆಗೆ ಶರಣಾಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.