ಚಿಕ್ಕಬಳ್ಳಾಪುರ: ರಾಜ್ಯದ 15 ಜಿಲ್ಲೆಗಳಲ್ಲಿ ಅಕ್ಟೋಬರ್ 21ರಂದು ಬೈ ಎಲೆಕ್ಷನ್ ಘೋಷಣೆಯಾಗಿದ್ದು, ಈ ಕುರಿತು ಸುಪ್ರೀಂ ಕೋರ್ಟಿನಲ್ಲಿ ತಡೆಯಾಜ್ಞೆ ಸಿಗುವ ವಿಶ್ವಾಸವಿದೆ ಎಂದು ಅನರ್ಹ ಶಾಸಕ ಡಾ. ಕೆ ಸುಧಾಕರ್ ತಿಳಿಸಿದರು.

ಸುದ್ದಿಗೋಷ್ಠಿಯೊಂದಿಗೆ ಮಾತನಾಡಿದ ಅವರು, ಈಗಾಗಲೇ ಚುನಾವಣೆ ಘೋಷಣೆ ಅಗಿದೆ. ಮತ್ತೊಂದೆಡೆ ಅನರ್ಹ ಶಾಸಕರ ಅರ್ಜಿ ಸುಪ್ರೀಂಕೋರ್ಟಿನಲ್ಲಿ ಸೋಮವಾರ ವಿಚಾರಣೆಗೆ ಬರಲಿದೆ. ಹೀಗಾಗಿ ತರಾತರಿಯಲ್ಲಿ ಅಂದರೆ ಸುಪ್ರೀಂಕೋರ್ಟಿನಲ್ಲಿ ಅರ್ಜಿ ಇತ್ಯರ್ಥಕ್ಕೂ ಮುನ್ನವೇ ಚುನಾವಣೆ ನಡೆದರೆ ಅನರ್ಹ ಶಾಸಕರಾದ ನಮಗೆ ಅನ್ಯಾಯ ಆದಂತೆ ಆಗುತ್ತದೆ ಎಂದರು.ಅಲ್ಲದೆ ಅರ್ಜಿ ಇತ್ಯರ್ಥ ಆಗುವವರೆಗೂ ಚುನಾವಣೆ ಮಾಡಬಾರದು ಎಂದು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂಕೋರ್ಟಿಗೆ ನಮ್ಮ ಪರ ವಕೀಲರು ಮನವಿ ಮಾಡಲಿದ್ದಾರೆ. ನಮಗೆ ಅನ್ಯಾಯ ಆಗಲು ಸುಪ್ರೀಂಕೋರ್ಟ್ ನ್ಯಾಯಾಧೀಶರು ಬಿಡುವುದಿಲ್ಲ ಎಂಬ ಆತ್ಮವಿಶ್ವಾಸವಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.