ವರದಿ: ಶಫೀ ಉಚ್ಚಿಲ

ಕಾಪು : ಪಡುಬಿದ್ರಿ ಸಮೀಪದ ಹೆಜಮಾಡಿಯಲ್ಲಿ ನವಯುಗ ಸಂಸ್ಥೆ ಗುರುವಾರ ಸ್ಥಳೀಯರಿಂದ ಮತ್ತೆ ಟೋಲ್ ವಸೂಲಿ ಮಾಡಿರುವುದನ್ನು
ವಿವಿದ ಸಂಘಟನೆಗಳು ಹಾಗೂ ಸ್ಥಳೀಯರು ತೀರ ವಿರೋಧ ವ್ಯಕ್ತಪಡಿಸಿದ್ದು, ಈ ಬಗ್ಗೆ ನಿರ್ಧರಿಸಿದ ಸಭೆಯನ್ನೂ ಮುಂದೂಡಿದ ಪ್ರಸಂಗ ಶುಕ್ರವಾರ ನಡೆದಿದೆ.

ಆರು ತಿಂಗಳ ಹಿಂದೆ ಸ್ಥಳೀಯರ ಸತತ ಹೋರಾಟದ ಬಳಿಕ ಪಡುಬಿದ್ರಿ ಗ್ರಾಮ ಪಂಚಾಯತಿ ವ್ಯಾಪ್ತಿಯವರೆಗೆ ಸುಂಕ ವಿನಾಯಿತಿ ನೀಡಲಾಗಿತ್ತು,ಆದರೆ ಗುರುವಾರ ಬೆಳಿಗ್ಗೆಯಿಂದ ಮತ್ತೆ ಏಕಾಏಕಿ ಸುಂಕ ವಸೂಲಿಯನ್ನು ಆರಂಭಿಸಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು,ಶುಕ್ರವಾರ ಬೆಳಗ್ಗೆ 10 ಗಂಟೆಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಸ್ಥಳೀಯರು ಹಾಗು ಟೋಲ್ ಅಧಿಕಾರಿಗಳ ಸಭೆ ನಡೆಸಲು ನಿರ್ಧರಿಸಲಾಗಿತ್ತು.ಆದರೆ ನವಯುಗ ಅಧಿಕಾರಿಗಳು ಸಭೆಗೆ ಹಾಜರಾಗದ ಕಾರಣ ಸಭೆಯನ್ನು ಭಾನುವಾರಕ್ಕೆ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.