ಯುವ ಮತದಾರರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಿ – ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್

0
58

ಉಡುಪಿ : ಯುವ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಜನವರಿ 25 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳು ಮತ್ತು ಬೂತ್ಗರಳಲ್ಲಿ ಜಾಥಾ ಮತ್ತು ಪ್ರತಿಜ್ಞಾ ಬೋಧನೆಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಯುವ ಮತದಾರರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಹೊಸದಾಗಿ ಮತದಾರರ ಪಟ್ಟಿಯಲ್ಲಿ ನೋಂದಾಯಿತರಾದವರ ಎಪಿಕ್ ಕಾರ್ಡನ್ನು ಮತದಾರರ ದಿನಾಚರಣೆಯಂದೇ ವಿತರಣೆ ಮಾಡಲು 50 ಜನ ಯುವ ಮತದಾರರನ್ನು ಗುರುತಿಸಲು ಹಾಗೂ ಜನವರಿ 24 ರಂದು ಮತದಾರರ ದಿನದ ಪ್ರತಿಜ್ಞಾ ವಿಧಿಯನ್ನು ಎಲ್ಲಾ ಕಡೆಯೂ ಬೋಧಿಸಲು ತಿಳಿಸಿದರು.

ಜನವರಿ 24 ರಂದು ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಪ್ರತಿಜ್ಞಾ ವಿಧಿ ಬೋಧಿಸುವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಎಲ್ಲಾ ಸಿಬ್ಬಂದಿಗಳೂ ಕಡ್ಡಾಯವಾಗಿ ಹಾಜರಿರಬೇಕು. ಜನವರಿ 25 ರಂದು ಉಡುಪಿ ಪುರಭವನದಲ್ಲಿ ನಡೆಯುವ ಮತದಾನ ದಿನಾಚರಣೆ ಕಾರ್ಯಕ್ರಮವನ್ನು ಕ್ಲಪ್ತ ಸಮಯಕ್ಕೆ ಪ್ರಾರಂಭಿಸಿ, ಉತ್ತಮ ರೀತಿಯಲ್ಲಿ ನಿರ್ವಹಿಸಬೇಕು. ಎಲ್ಲಾ ಬೂತ್ಗರಳಲ್ಲಿಯೂ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಬ್ಯಾನರ್ಗಾಳನ್ನು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದ ಅಂಗವಾಗಿ ಎಲ್ಲಾ ಶಾಲೆಗಳು, ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆಗಳನ್ನು ಈಗಾಗಲೇ ಹಮ್ಮಿಕೊಳ್ಳಲಾಗಿದ್ದು, ಮತದಾರರ ದಿನಾಚರಣೆಯಂದು ವಿಜೇತರಿಗೆ ಬಹುಮಾನವನ್ನು ನೀಡಲಾಗುವುದು. ಉತ್ತಮ ಇ.ಎಲ್.ಸಿ ಮತ್ತು ಸಿ.ಜೆ.ಸಿಗಳನ್ನು ಗೌರವಿಸಲಾಗುವುದು ಮತ್ತು ಅತಿಕ್ಲಿಷ್ಟಕರ ಸನ್ನಿವೇಶಗಳಲ್ಲಿಯೂ ಮತದಾನ ಮಾಡಿರುವ 100 ವಯಸ್ಸು ಮೇಲ್ಪಟ್ಟ ಮತದಾರರನ್ನು ಸನ್ಮಾನಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಎಲ್ಲಾ ತಾಲೂಕುಗಳ ತಹಶೀಲ್ದಾರ್ಗರಳು ಯು.ಎಲ್.ಬಿ ಗಳ ಜೊತೆ ಸಮಾಲೋಚನೆ ನಡೆಸಬೇಕು ಮತ್ತು ಈ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಲು ನಗರಸಭೆ ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಸಾರ್ವಜನಿಕ ಶಿಕ್ಷಣ ಇಲಾಖಾಧಿಕಾರಿಗಳು, ತಾಲೂಕು ತಹಶೀಲ್ದಾರ್ಗುಳು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here