ಉಡುಪಿ : ಪಲಿಮಾರು ಮಠದ ಜಗುಲಿಯ ಮೇಲೆ ಪ್ರಜ್ಞಾಹಿನನಾಗಿ ಮಲಗಿದ ಸ್ಥಿತಿಯಲ್ಲಿ ಕಂಡು ಬಂದಿರುವ, ಅಪರಿಚಿತ ಯುವಕನನ್ನು ಮಠದ ಮೂಲಗಳು ನೀಡಿದ ಮಾಹಿತಿ ಮೆರೆಗೆ, ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ ಘಟನೆ ಗುರುವಾರ ನಡೆದಿದೆ.

ಯುವಕನಿಗೆ ಸುಮಾರು 25 ವರ್ಷ ಪ್ರಾಯ ಅಂದಾಜಿಸಲಾಗಿದೆ. ಯುವಕನು ಪ್ರಜ್ಞಾಹಿನ ಸ್ಥಿತಿಯಲ್ಲಿದ್ದರಿಂದ ಹೆಸರು ವಿಳಾಸ ತಿಳಿದು ಬಂದಿಲ್ಲ. ಯುವಕನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ವಾರಸುದಾರರು ತುರ್ತಾಗಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.