ಉಡುಪಿ: ಜೂನ್ 21ರಂದು ಅಂತರರಾಷ್ಟ್ರೀಯ ಯೋಗ ದಿನವನ್ನು ಎಲ್ಲೆಡೆಯೂ ಆಚರಿಸುತ್ತಿದ್ದು ಉಡುಪಿಯಲ್ಲು ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಮಟ್ಟದ ಯೋಗ ದಿನಾಚರಣೆ ಕಾರ್ಯಕ್ರಮವು ನಗರದ ಅಜ್ಜಕಾಡಿನ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಉಡುಪಿ ಜಿಲ್ಲಾ ಪಂಚಾಯಿತ್   ಅಧಿಕಾರಿಗಳು ಉಡುಪಿ ಜಿಲ್ಲೆಯ ವಿವಿಧ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಯೋಗವನ್ನು ಪ್ರದರ್ಶಿಸಿದರು. ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ್ ಬಾಬು, ಉಡುಪಿ ತಾಲ್ಲೂಕು ಪಂಚಾಯತ್ ನಳಿನಿ ಪ್ರದೀಪ್ ಅವರೊಂದಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ದಿನಕರ್ ಬಾಬು ಮಾತನಾಡಿ ಯೋಗವು ಪ್ರಾಚೀನ ಭಾರತೀಯ ಅಭ್ಯಾಸವಾಗಿದ್ದು, ಇದು ಅನೇಕ ರೋಗಗಳು ಮತ್ತು ಆರೋಗ್ಯ ಅಸ್ವಸ್ಥತೆಗಳನ್ನು ಗುಣಪಡಿಸಲು ಬಹಳ ಉಪಯುಕ್ತವಾಗಿದೆ. ಇದು ದೈಹಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕೆ ಸಮಗ್ರ ವಿಧಾನವಾಗಿದೆ. ಈಗ ಯೋಗ ದಿನವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲಾಗುತ್ತಿದ್ದು, 170 ಕ್ಕೂ ಹೆಚ್ಚು ರಾಷ್ಟ್ರಗಳ ಜನರು ಇದನ್ನು ಅಭ್ಯಾಸ ಮಾಡುತ್ತಿದ್ದಾರೆ. ಭಾರತವು ಯೋಗದಂತಹ ಶ್ರೀಮಂತ ಸಂಪತ್ತನ್ನು ಹೊಂದಿರುವ ಇತರ ದೇಶಗಳಿಗೆ ಮಾದರಿಯಾಗಿದೆ. ಉತ್ತಮ ಆರೋಗ್ಯ ಮತ್ತು ಉತ್ತಮ ಮನಸ್ಸನ್ನು ಕಾಪಾಡಿಕೊಳ್ಳಲು ಯೋಗ ಅತ್ಯಗತ್ಯ ಎಂದು ಹೇಳಿದರು.

ಅಜ್ಜಕಾಡಿನ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ವಿವಿಧ ಶಾಲೆಗಳು ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಯೋಗ ಪ್ರದರ್ಶನ ನೀಡಿದರು. ಮತ್ತು ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಸಹ ಯೋಗ ದಿನವನ್ನು ಆಚರಿಸಲಾಯಿತು. ಮತ್ತು ಜಿಲ್ಲಾ ಬಿಜೆಪಿ ಕಚೇರಿ ಶೇಷಶಾಯನ ಸಭಾಂಗಣದಲ್ಲಿ ನಡೆಸಿದ ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು ಯೋಗ ಪ್ರದರ್ಶನ ನೀಡಿದರು.

ಜಿಲ್ಲಾಢಳಿತ ನಡೆಸುವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಯೇ ಗೈರು.

ಇಂದು ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಯೇ ಗೈರಾಗಿದ್ದು ಉಡುಪಿಯಲ್ಲಿ ಕಾಟಾಚಾರಕ್ಕೆ ಯೋಗ ದಿನಾಚರಣೆ ಆಚರಿಸಿದಂತೆ ತೋರುತ್ತಿತ್ತು. ಜಿಲ್ಲಾಧಿಕಾರಿ ಹೆಸ್ಸಿಬಾ ರಾಣಿ ಕೊರ್ಲಪಾಟಿ  ಸೇರಿಂದತೆ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಸಿಂಧು ರೂಪೇಶ್, ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಗೈರು ಹಾಜರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.