ಕುಂದಾಪುರ : ಗಂಗೊಳ್ಳಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಗಂಗೊಳ್ಳಿ ಘಟಕ ಮತ್ತು ಉಡುಪಿ ಜನಸೇವಾ ಕ್ರೆಡಿಟ್ ಸೌಹಾರ್ದ ಸಹಕಾರಿ ನಿ. ಇದರ ಸಂಯುಕ್ತ ಆಶ್ರಯದಲ್ಲಿ ಇಂದು ಕಟ್ಪಡ ಕಾರ್ಮಿಕರ ನೂರಾರು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗು ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಗಂಗೊಳ್ಳಿಯ ಶಾರದ ಮಂಟಪದಲ್ಲಿ ಹಮ್ಮಿಕೊಳ್ಳಲಾಯಿತು.

ಸಮಾರಂಭವನ್ನು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಕೆ.ಶಂಕರ್ ಉಧ್ಘಾಟಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೊತ್ಸಾಹ ಮಾಡುವ ನಿಟ್ಟಿನಲ್ಲಿ ಅವರ ಪ್ರತಿಭೆಗಳಿಗೆ ಕಳೆದ 4ವರ್ಷಗಳಿಂದ ಕಾರ್ಮಿಕ ಸಂಘಟನೆಯಾಗಿ ಶಿಕ್ಷಣ ಪ್ರೇಮಿ ಸಂಘ ಸಂಸ್ಥೆಗಳ ಜೊತೆ ಊರಿನ ವಿದ್ಯಾರ್ಥಿಗಳಿಗೆ ಸಹಕಾರ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಹೇಳಿದರು.

ಸಮಾರಂಭದ ಮುಖ್ಯ ಅತಿಥಿಯಾಗಿ ಶ್ರೀಮತಿ ಶರ್ಮಿಳ ಸತೀಶ್ ಜಿ.ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ,ಸಂಘದ ಪ್ರಮುಖರಾದ ಸಾವಿತ್ರಿ ಹೆಮ್ಮಾಡಿ,ಬೈಂದೂರು ಕಟ್ಟಡ ಕಾರ್ಮಿಕರ ಸಂಘದ ಮುಖಂಡರಾದ ಗಣೇಶ್ ಮೊಗವೀರ ಕುಂದಾಪುರ ಸಂಘದ ಉಪಾಧ್ಯಕ್ಷರಾದ ಚಿಕ್ಕಮೊಗವೀರ ಮಾತನಾಡಿದರ. ಸಭೆಯ ಅಧ್ಯಕ್ಷತೆಯನ್ನು ಶಾರದೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀಧರ ಎನ್ ಸಕ್ಲಾತಿ ವಹಿಸಿದ್ದರು.ಕುಂದಾಪುರ ಕಟ್ಟಡ ಕಾರ್ಮಿಕರ ಸಂಘದ ಕಾರ್ಯದರ್ಶಿ ಅರುಣ್ ಕುಮಾರ್ ಗಂಗೊಳ್ಳಿ ಪ್ರಸ್ತಾವನೆ ಮಾಡಿದರು. ಶಿವಾನಂದ ಸ್ವಾಗತಿಸಿದರು. ಅಭಿನಂದನ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.