ಆಗಸ್ಟ್ 29ರಂದು ಮಂಜುನಾಥ ಉದ್ಯಾವರ ಸಂಸ್ಮರಣೆ – ಏಕ ವ್ಯಕ್ತಿ ರಂಗ ಪ್ರಯೋಗ

72

ಉಡುಪಿ : ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಉದ್ಯಾವರ ಗ್ರಾಮದ ಅಭಿವೃದ್ಧಿಯ ಹರಿಕಾರರಾದ ದಿ| ಮಂಜುನಾಥ ಉದ್ಯಾವರ್‍ರವರ ಏಳನೇ ವರ್ಷದ ಸಂಸ್ಮರಣಾ ಕಾರ್ಯಕ್ರಮ ತಾ.29.08.2019 ಗುರುವಾರ ಸಂಜೆ ಗಂಟೆ 5.00ಕ್ಕೆ ಉದ್ಯಾವರ ಶ್ರೀ ವಿಠೋಬ ರುಖುಮಾಯಿ ನಾರಾಯಣ ಗುರು ಮಂದಿರದಲ್ಲಿ ಜರಗಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಧರ್ಮಗುರುಗಳಾದ ರೆ|ಫಾ| ವಿಲಿಯಂ ಮಾರ್ಟಿಸ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕುಂದಾಪುರದ ನ್ಯಾಯವಾದಿ ಶ್ಯಾಮಲಾ ಭಂಡಾರಿ ಮತ್ತು ಉಡುಪಿ ಜಿಲ್ಲಾ ಪಂಚಾಯತ್‍ನ ಮಾಜಿ ಅಧ್ಯಕ್ಷರಾದ ಎಸ್. ರಾಜು ಪೂಜಾರಿಯವರು ಆಗಮಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿದೂಷಿ ಮಂಜುಳಾ ಸುಬ್ರಹ್ಮಣ್ಯ ಇವರಿಂದ ಏಕವ್ಯಕ್ತಿ ರಂಗ ಪ್ರಯೋಗ “ರಾಧಾ”( ನಿರ್ದೇಶನ ಡಾ| ಶ್ರೀಪಾದ್ ಭಟ್, ರಚನೆ: ಸುಧಾ ಆಡುಕಳ) ಜರಗಲಿದೆ.

ತಾವು ಆಗಮಿಸಿ ಅಗಲಿದ ಚೇತನದ ಸ್ಮರಣೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಂಸ್ಥೆಯ ಅಧ್ಯಕ್ಷರಾದ ತಿಲಕ್‍ರಾಜ್ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಗಿರೀಶ್ ಗುಡ್ಡೆಯಂಗಡಿ, ಕೋಶಾಧಿಕಾರಿ ಸೋಮಶೇಖರ್ ಸುರತ್ಕಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.