ಲಂಡನ್: ಭಾರತೀಯ ಬ್ಯಾಂಕ್ ಗಳಿಗೆ ಬಹುಕೋಟಿ ವಂಚನೆ ಮಾಡಿ ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ವಿಜಯ್ ಮಲ್ಯ ಇಂದು ಲಂಡನ್ ನಲ್ಲಿ ಮಾಧ್ಯಮಗಳ ಕ್ಯಾಮೆರಾಗಳ ಕಣ್ಣಿಗೆ ಸಿಕ್ಕಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸದ ಮಲ್ಯ ಪಂದ್ಯ ವೀಕ್ಷಣೆಗೆ ಬಂದಿದ್ದೇನೆಂದು ಮಾಧ್ಯಮಗಳ ವಿರುದ್ಧ ಗರಮ್ ಆಗಿದ್ದಾರೆ.

ಕಿಂಗ್ ಫಿಷರ್ ಏರ್ ಲೈನ್ಸ್ ಸಂಸ್ಥೆಯ ಹೆಸರಲ್ಲಿ ವಿಜಯ್ ಮಲ್ಯ ಭಾರತದ ವಿವಿಧ ಬ್ಯಾಂಕ್ ಗಳಿಂದ ಬಹುಕೋಟಿ ಸಾಲ ಪಡೆದಿದ್ದು, ಸಾಲವನ್ನು ಮರುಪಾವತಿಸದೇ ಲಂಡನ್ ಗೆ ಪರಾರಿಯಾಗಿದ್ದಾರೆ. ಭಾರತದಲ್ಲಿ ಮಲ್ಯ ವಿರುದ್ಧ ಹಲವು ಪ್ರಕರಣಗಳ ದಾಖಲಾಗಿದ್ದು, ಈಗಾಗಲೇ ಬ್ರಿಟನ್ ಕೋರ್ಟ್ ಕೂಡ ಮಲ್ಯ ಗಡಿಪಾರು ಮಾಡುವ ಸಂಬಂಧ ಪ್ರಕರಣದ ವಿಚಾರಣೆ ನಡೆಸುತ್ತಿದೆ. ಈ ಪ್ರಕರಣ ಇದೀಗ ನಿರ್ಣಾಯಕ ಹಂತದಲ್ಲಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.