ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜಕೀಯ ಏಳಿಗೆಗೆ ತಡೆಯೊಡ್ಡಬೇಕೆಂಬ ಷಡ್ಯಂತ್ರ ರೂಪಿಸಿದ್ದಾರೆ ಎಂದು ಯುವ ಬಿಜೆಪಿ ಯುವ ಘಟಕದ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ರಾಜಕೀಯವಾಗಿ ಈಗಷ್ಟೇ ಅಂಬೆಗಾಲಿಡುತ್ತಿರುವ ತಾನು, ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರೇರಣೆಗೊಂಡು, ತಂದೆ ಬಿ.ಎಸ್.ಯಡಿಯೂರಪ್ಪನವರ ಹೋರಾಟದ ಬದುಕನ್ನು ಆದರ್ಶವಾಗಿಟ್ಟುಕೊಂಡು ಸಾರ್ವಜನಿಕ ಕ್ಷೇತ್ರದಲ್ಲಿ ಸಾರ್ಥಕ ಹೆಜ್ಜೆ ಇಡಬೇಕೆಂಬ ಹಂಬಲ ಹೊಂದಿದ್ದೇನೆ. ಹಾಗಾಗಿ, ಭಾರತೀಯ ಜನತಾ ಪಾರ್ಟಿಯ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಗುರುತಿಸಿಕೊಂಡು ಯುವ ಸಮುದಾಯದಲ್ಲಿ ಒಂದು ಆತ್ಮ ವಿಶ್ವಾಸವನ್ನು ತುಂಬಿ ರಾಷ್ಟ್ರ ಕಟ್ಟುವ ಕಾಯಕದಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದೇನೆ ಎಂದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.