ಮಂಗಳೂರು: ಸೆ.30 ರಿಂದ ನವರಾತ್ರಿ ಆರಂಭವಾಗಲಿದೆ. ಆದರಿಂದ ದಸರಾ ರಜೆಯನ್ನು ಮಂಜೂರು ಮಾಡಬೇಕೆಂದು ಶಾಸಕ ಡಿ ವೇದವ್ಯಾಸ ಕಾಮತ್ ಅವರು ರಾಜ್ಯ ಪ್ರಾರ್ಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸಚಿವ ಸುರೇಶ್ ಕುಮಾರ್ ಅವರನ್ನು ಭೇಟಿಯಾದ ಶಾಸಕ ಕಾಮತ್ ಮಂಗಳೂರಿನಲ್ಲಿ ದಸರಾ ಹಬ್ಬ ಅತ್ಯಂತ ಸಂಭ್ರಮದಿಂದ ಆಚರಿಸಲ್ಪಡುತ್ತದೆ. ನವರಾತ್ರಿಯ ಧಾರ್ಮಿಕ ವಿಧಿವಿಧಾನಗಳು ಮಂಗಳೂರಿನಲ್ಲಿ ಸೆ. 28 ರಿಂದಲೇ ಆರಂಭವಾಗುತ್ತದೆ.ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹೋಮ ಗಳು ಪ್ರಾರಂಭವಾಗುವುದರಿಂದ ಪೋಷಕರಿಗೆ, ಮಕ್ಕಳಿಗೆ ಭಾಗವಹಿಸಲು ರಜೆ ಇದ್ದರೆ ಅನುಕೂಲವಾಗುತ್ತದೆ ಆದ್ದರಿಂದ ಸೆಪ್ಟೆಂಬರ್ 30ರಿಂದ ರಜೆ ಮಂಜೂರು ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.