ಪಶ್ಚಿಮ ಬಂಗಾಳ: ಸೋಮವಾರ ರಾತ್ರಿ ನಡೆದ ಬಾಂಬ್‌ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಕನ್ಕಿನಾರ ಪ್ರದೇಶದಲ್ಲಿ ನಡೆದಿದೆ. ಮೂಲಗಳ ಪ್ರಕಾರ ದುಷ್ಕರ್ಮಿಗಳು ಕಚ್ಚಾ ಬಾಂಬ್‌ನ್ನು ಎಸೆದಿದ್ದಾರೆ.

ಈ ಪ್ರದೇಶದಲ್ಲಿ ರಾಬರಿಗಳು ಕೂಡ ಹೆಚ್ಚಾಗುತ್ತಿರುವುದು ಕೂಡ ನಮ್ಮ ಆತಂಕಕ್ಕೆ ಕಾರಣವಾಗಿದ್ದು, ಆಡಳಿತಾಂಗವು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಸದ್ಯ ಸ್ಥಳದಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅಮಿತ್ ಶಾ ರ಼್ಯಾಲಿಯ ನಂತರ ಟಿ.ಎಮ್.ಸಿಯೊಂದಿಗಿನ ಕಚ್ಚಾಟ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕದನಕ್ಕೆ ಕಾರಣವಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.