ಕೋಲ್ಕತ :ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಬಿಜೆಪಿಯ ವಿರುದ್ಧ ಗುಡುಗಿದ್ದು, “2019ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಪಶ್ಚಿಮ ಬಂಗಾಲದಲ್ಲಿ ಒಂದು ಸೀಟನ್ನು ಕೂಡ ಗೆಲ್ಲಲು ನಾನು ಬಿಡುವುದಿಲ್ಲ” ಎಂದು ಟಿಎಂಸಿ ಮುಖ್ಯಸ್ಥೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುಡುಗಿದ್ದಾರೆ.

“ಪಶ್ಚಿಮ ಬಂಗಾಲದಲ್ಲಿ ಬಿಜೆಪಿಯ ಆಟ ನಡೆಯುವುದಿಲ್ಲ. ಟಿಎಂಸಿ ಕಾರ್ಯಕರ್ತರು ಬಿಜೆಪಿಗೆ ಒಂದು ಸೀಟನ್ನು ಕೂಡ ಗೆಲ್ಲಲು ಬಿಡುವುದಿಲ್ಲ” ಎಂದು ಮಮತಾ ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಆಳುವ ಬಿಜೆಪಿಯನ್ನು ಕಿತ್ತೂಗೆಯಲು ಎಲ್ಲ ವಿರೋಧ ಪಕ್ಷಗಳು ಒಂದಾಗಬೇಕು ಎಂದು ಮಮತಾ ಕರೆ ನೀಡಿದರು. ಈ ನಿಟ್ಟಿನಲ್ಲಿ ತಾನು ಕೇರಳ ಮುಖ್ಯಮಂತ್ರಿಗಳನ್ನು ಈಗಾಗಲೇ ಆಹ್ವಾನಿಸಿದ್ದು ತನ್ನ ವಿರುದ್ಧ ನಿರಂತರವಾಗಿ ಕೆಲಸ ಮಾಡುತ್ತಿರುವ ಸಿಪಿಎಂ ಗೆ ಕೂಡ ತಾನು ಆಹ್ವಾನಿಸುವುದಾಗಿ ಹೇಳಿದರು.

ಮಧ್ಯ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಜತೆಗೆ ಬಿಎಸ್ಪಿ ಚುನಾವಣಾ ಮೈತ್ರಿ ನಡೆಸುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿ ಈ ಎರಡೂ ರಾಜ್ಯಗಳಲ್ಲಿ ಬಿಎಸ್ಪಿ ಸ್ವತಂತ್ರವಾಗಿ ಹೋರಾಡುವುದೆಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಮಮತಾ, ಜನವರಿ 19ರಂದು ನಡೆಯಲಿರುವ ಭಾಗವಹಿಸುವಂತೆ ಟಿಎಂಸಿ ರಾಲಿಯಲ್ಲಿ ತಾನು ಕಾಂಗ್ರೆಸ್ ಮತ್ತು ಬಿಎಸ್ಪಿ ಎರಡೂ ಪಕ್ಷಗಳಿಗೆ ಆಹ್ವಾನಿಸುವುದಾಗಿ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.