ಪಶ್ಚಿಮ ಬಂಗಾಳ: ಬಿಜೆಪಿ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಸಕ್ರಿಯವಾಗಿ ಎಂಟ್ರಿ ಪಡೆದ ದಿನದಿಂದಲೂ ರಾಜಕೀಯ ಜಗಳ ತಾರಕಕ್ಕೇರಿದೆ. ರಾಜಕೀಯ ಕೊಲೆಗಳು ನಡೆದಿವೆ.

ಇಂದು ಬಿಜೆಪಿ ಪ್ರತಿಭಟನೆ ನಡೆಸಿ ರಾಜ್ಯ ರಾಜಕೀಯದಲ್ಲಿ ಮತ್ತೆ ಕೋಲಾಹಲ ಎಬ್ಬಿಸಿದೆ. ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ಮೆರವಣಿಗೆಯನ್ನು ನಿಲ್ಲಿಸುವಂತೆ ಪೊಲೀಸರು ಹಲವು ಬಾರಿ ಮನವಿ ಮಾಡಿದರೂ ಪ್ರತಿಭಟನಾಕಾರರು ಕೇಳಲಿದಿದ್ದಾಗ ಪೊಲೀಸರು ಜಲಫಿರಂಗಿ ಹಾಗೂ ಲಾಠಿಚಾರ್ಜ್​ ಮೂಲಕ ಕಾರ್ಯಕರ್ತರನ್ನು ಚದುರಿಸಿದರು.

ಬಾಶಿರ್​ಹಟ್​ನಲ್ಲಿ ಕಳೆದ ಶನಿವಾರ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಪ್ರತಿಭಟನೆ ಹಮ್ಮಿಕೊಂಡಿದ್ದರು.

ಬಿಜೆಪಿ ಟಿಎಮ್ ಸಿ ನಡುವಿನ ಜಟಾಪಟಿ ಮುಂದಿನ ವಿಧಾನ ಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ನಡೆಯುತ್ತಿದ್ದು ಪ.ಬ ರಾಜ್ಯದ ಜನತೆ ಸಂಕಷ್ಟಕ್ಕೊಳಗಾಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.