ಕುಂದಾಪುರ:ಕೊಸ್ಟಲ್ ಮಿರರ್: ಕೂತುಹಲಕಾರಿ ಮೂಡಿಸುವ ಬೆಳವಣಿಗೆಯಲ್ಲಿ ಯಡಿಯೂರಪ್ಪ ಮತ್ತು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ವಿರುದ್ದ ವಾಟ್ಸಪ್ ಸಂದೇಶ ಕಳುಹಿಸಿದ ಕಾರಣ ಕುಂದಾಪುರ ಬಿಜೆಪಿಯ ವಾಟ್ಸಪ್ ಗ್ರೂಪಿನ ಅಡ್ಮಿನ್ ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲಾಗಿದೆ.ಅವಹೇಳನಕಾರಿ ವಾಟ್ಸಪ್ ಸಂದೇಶದಿಂದ ಬೆಸೆತ್ತ ಬಿಜೆಪಿ ಮಂಡಲ್ ಪಂಚಾಯತ್ ಅಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ ಸೇರಿದಂತೆ ಪಕ್ಷದ ಹಲವು ನಾಯಕರು ಸೈಬರ್ ಕ್ರೈಮ್ ವಿಭಾಗದಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಪರಿವರ್ತನಾ ಸಮಾವೇಶದಲ್ಲಿ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಈ ಘಟನೆ ನಡೆದಿರುವುದು ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಗೊಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.