ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಹಿನ್ನಲೆಯಲ್ಲಿ ಇದೀಗ ಮೈತ್ರಿ ಸರಕಾರ ಬಹುಮತ ಕಳೆದುಕೊಂಡಿದೆ ಎಂದಿರುವ ಯಡಿಯೂರಪ್ಪ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ಕೊಡಲೇ ಬೇಕು ಎಂದು ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ,ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಬಂಡಾಯ ಶಾಸಕರ ರಾಜೀನಾಮೆ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ಮಧ್ಯಂತರ ಆದೇಶ ಸಂವಿಧಾನದ ಮತ್ತು ಪ್ರಜಾಪ್ರಭುತ್ವದ ಗೆಲುವು ಎಂದು ತಿಳಿಸಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಕುಮಾರಸ್ವಾಮಿ ಬಹುಮತ ಕಳೆದುಕೊಂಡಿದ್ದಾರೆ. ಯಾವಾಗ ಸರ್ಕಾರಕ್ಕೆ ಬಹುಮತ ಇಲ್ಲವೋ ಆಗ ಕುಮಾರಸ್ವಾಮಿ ರಾಜೀನಾಮೆ ಕೊಡಲೇಬೇಕಾಗಿದೆ. ನಾನು ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುವುದಾಗಿ ಹೇಳಿದರು.

ನಾಳೆ ನಡೆಯುವ ವಿಶ್ವಾಸಮತ ಯಾಚನೆ ವೇಳೆ ಕುಮಾರಸ್ವಾಮಿ ರಾಜೀನಾಮೆ ನೀಡಲೇಬೇಕಾಗಿದೆ. ಸರ್ಕಾರ ರಚನೆಗೆ ಬೇಕಾದ ಶಾಸಕರ ಸಂಖ್ಯೆ ಮೈತ್ರಿ ಸರ್ಕಾರದಲ್ಲಿ ಇಲ್ಲ ಎಂದು ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.