ನವದೆಹಲಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶುಕ್ರವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಪ್ರವಾಹದಿಂದ ತತ್ತರಿಸಿರುವ ಕರ್ನಾಟಕಕ್ಕೆ ಪರಿಹಾರ ಕಾರ್ಯಗಳಿಗಾಗಿ ಕೂಡಲೇ ಅನುದಾನ ಬಿಡುಗಡೆಗೆ ಕ್ರಮವಹಿಸುವಂತೆ ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ, ಕೂಡಲೇ ನಷ್ಟದ ಅಂದಾಜು ಮಾಡಲು ಕೇಂದ್ರ ಸರ್ಕಾರದ ಅಧ್ಯಯನ ತಂಡವನ್ನು ಕಳುಹಿಸಲಾಗುವುದು ಎಂದು ಭರವಸೆ ನೀಡಿದರು.

ಕರ್ನಾಟಕದ ಪ್ರವಾಹ ಪರಿಸ್ಥಿತಿಯ ಗಂಭೀರತೆಯ ಕುರಿತು 45 ನಿಮಿಷಗಳ ಕಾಲ ಚರ್ಚಿಸಿ, ಪ್ರಧಾನಿಗೆ ಮನವರಿಕೆ ಮಾಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ನಷ್ಟ ಸಂಭವಿಸಿದೆ. ಪುನರ್ನಿಮಾಣ ಮತ್ತು ಪರಿಹಾರ ಕಾರ್ಯಗಳಿಗೆ ಹೆಚ್ಚುವರಿ ಅನುದಾನ ಅಗತ್ಯವಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.