ಎಬಿಡಿ ವಿಲಿಯರ್ಸ್ ಆರ್ಭಟದ ಮುಂದೆ ಕೆಕೆಆರ್ ಧೂಳೀಪಠ!

ಕುಡಿದ ಮತ್ತಿನಲ್ಲಿ ಹೊಡೆದು ಸಾಯಿಸಿದ ಕುಡುಕ ಗಂಡ

ಆನೇಕಲ್(ಅ​.26): ಕುಡಿದ ಮತ್ತಿನಲ್ಲಿ ಹೆಂಡತಿಗೆ ಗಂಡನೊಬ್ಬ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೇಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವಾರನ್ನು ಗೌರಮ್ಮ(42)ಎಂದು ಗುರುತಿಸಲಾಗಿದೆ. ಕುಮಾರ್(48) ಹೆಂಡತಿಯನ್ನೇ ಕೊಂದ ಪಾಪಿ...

ಶಿವಮೊಗ್ಗ : ಮಳೆಯಿಂದ ಮುರಿದು ಬಿದ್ದ ಬನ್ನಿ ಮಂಟಪ

ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ. ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ...

ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ 50ಕ್ಕೂ ಅಧಿಕ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ತೆಕ್ಕೆಗೆ

ಕುಂದಾಪುರ : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವದಲ್ಲಿ ಬಿಜೆಪಿಯ ಐವತ್ತು ಕಾರ್ಯಕರ್ತರು ಕಾಂಗ್ರೆಸ್'ಗೆ ಸೇರ್ಪಡೆಗೊಂಡರು.   ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಕಟ್ ಬೆಲ್ತೂರು ನಿವಾಸದಲ್ಲಿ ಕಟ್ ಬೆಲ್ತೂರು, ಹೆಮ್ಮಾಡಿ...

ಶಿವಸೇನೆ ಮುಖಂಡ ರಾಹುಲ್ ಶೆಟ್ಟಿ ಬರ್ಬರ ಹತ್ಯೆ

ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ. ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು...

ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ. ಮಾಡದ ಕೃತ್ಯಕ್ಕೆ...

ಶಾರ್ಜಾ : ಕೆಕೆಆರ್ ಎದುರಿನ ಸೋಮವಾರದ ಐಪಿಎಲ್‌ ಮುಖಾಮುಖಿಯಲ್ಲಿ ಸಂಘಟಿತ ಬೌಲಿಂಗ್‌ ದಾಳಿ ನಡೆಸಿದ ರಾಯಲ್‌ ಚಾಲೆಂಜರ್ ಬೆಂಗಳೂರು 82 ರನ್‌ ಗೆಲುವು ದಾಖಲಿಸಿದೆ. ಮೊದಲು ಬ್ಯಾಟಿಂಗ್‌ ನಡೆಸಿದ ಆರ್‌ಸಿಬಿ 2 ವಿಕೆಟಿಗೆ 194 ರನ್‌ ಗಳಿಸಿ ಸವಾಲೊಡ್ಡಿತು. ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಕೆಕೆಆರ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 112 ರನ್‌ ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದು ಕೊಂಡ ಆರ್‌ಸಿಬಿ ಎಬಿ ಡಿ’ವಿಲಿಯರ್ ಅವರ ಸ್ಫೋಟಕ ಆಟದಿಂದಾಗಿ ತಂಡವು ಕೇವಲ 2 ವಿಕೆಟಿಗೆ 194 ರನ್ನುಗಳ ಬೃಹತ್‌ ಮೊತ್ತ ಪೇರಿಸಿತು.

ಉತ್ತಮ ಆರಂಭ ಪಡೆದ ಆರ್‌ಸಿಬಿ ತಂಡ ಕೊನೆ ಹಂತದಲ್ಲಿ ಸಿಡಿಯಿತು. ಕೆಕೆಆರ್‌ ದಾಳಿಯನ್ನು ಪುಡಿಗಟ್ಟಿದ ಡಿ’ವಿಲಿಯರ್ ಮತ್ತು ನಾಯಕ ವಿರಾಟ್‌ ಕೊಹ್ಲಿ ಕೊನೆಯ ನಾಲ್ಕು ಓವರ್‌ಗಳಲ್ಲಿ 65 ರನ್‌ ಪೇರಿಸಿದರು. ಆರ್‌ಸಿಬಿ ಮೊದಲ 14 ಓವರ್‌ ಮುಗಿದಾಗ 107 ರನ್‌ ತಲುಪಿತ್ತು. ಅಲ್ಲಿಂದ ತಂಡದ ಬ್ಯಾಟಿಂಗ್‌ ವೈಭವ ಮೊದಲ್ಗೊಂಡಿತ್ತು. ಪ್ರತಿ ಓವರ್‌ಗಳಲ್ಲಿಯೂ ತಂಡ ಹತ್ತಕ್ಕಿಂತ ಹೆಚ್ಚು ರನ್‌ ಗಳಿಸುತ್ತ ಹೋಯಿತು.

ಕೆಕೆಆರ್‌ ದಾಳಿಯನ್ನು ಒಂದೇ ಸವನೆ ಚಚ್ಚಿದ ಡಿ’ವಿಲಿಯರ್ ಕೇವಲ 33 ಎಸೆತಗಳಿಂದ 73 ರನ್‌ ಗಳಿಸಿ ಅಜೇಯರಾಗಿ ಉಳಿದರು. 5 ಬೌಂಡರಿ ಬಾರಿಸಿದ ಅವರು 6 ಮನಮೋಹಕ ಸಿಕ್ಸರ್‌ ಸಿಡಿಸಿ ರಂಜಿಸಿದರು. ಅವರಿಗೆ ಉತ್ತಮ ಬೆಂಬಲ ನೀಡಿದ ಕೊಹ್ಲಿ 28 ಎಸೆತಗಳಿಂದ 33 ರನ್‌ ಹೊಡೆದರು.

LEAVE A REPLY

Please enter your comment!
Please enter your name here