ಮೂವರು ಮಕ್ಕಳಿಗೆ ವಿಷ ನೀಡಿ ಆತ್ಮಹತ್ಯೆಗೆ ಶರಣಾದ ಗೃಹಿಣಿ

ಬನಹಟ್ಟಿ:ಮೂವರು ಮಕ್ಕಳೊಂದಿಗೆ ತಾಯಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಸಮೀಪದ ಜಗದಾಳ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶನಿವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಭಾಗ್ಯಶ್ರೀ ಚಿಕ್ಕಯ್ಯ ಮಠದ(32) ಶಿವಾನಿ(12), ಶಿವಶಂಕರ(10), ಶಿವಶ್ರೀ(9)ಎಂದು ಗುರುತಿಸಲಾಗಿದೆ.ಕಳೆದೆರಡು ವರ್ಷಗಳ ಹಿಂದೆ ಪತಿ ಚಿಕ್ಕಯ್ಯ ದಾನಯ್ಯ ಮಠದ ಬಂಡಿಗಣಿಯ ಹೊರವಲಯದಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಕೊಲೆಯಾಗಿದ್ದರು.ಇದೇ ಕಾರಣಕ್ಕೆ ಭಾಗ್ಯಶ್ರೀ ಮನ ನೊಂದಿದ್ದರು ಎನ್ನಲಾಗಿದೆ. ಈ ಮೂವರಿಗೂ ವಿಷ ಉಣಿಸಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ತಿಳಿದು
ಊಹಿಸಲಾಗಿದೆ.

ಶನಿವಾರ ಬೆಳಿಗ್ಗೆ 6.30 ರ ಸುಮಾರಿಗೆ ತಮ್ಮ ತೋಟದ ಮನೆಯಿಂದ ಜಗದಾಳ ಗ್ರಾಮದ ಹತ್ತಿರದ ದುರ್ಗಾದೇವಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತಿಳಿಸಿ 10 ಗಂಟೆಯಾದರೂ ಮನೆಗೆ ವಾಪಸ್ ಬಾರದೆ ಇದ್ದಾಗ, ಮನೆಯವರು ಹುಡುಕಾಟ ನಡೆಸಿದ ನಂತರ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿರುವ ಅರಣ್ಯ ಪ್ರದೇಶದಲ್ಲಿ ಭಾಗ್ಯಶ್ರೀ ತೀವ್ರ ಅಸ್ವಸ್ಥದಿಂದ ಬಳಲುತ್ತಿದ್ದರೆ ಮೂವರು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದವು.ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ...

ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ವಿದ್ಯಾರ್ಥಿವೇತನ ಶಿಬಿರ

ದಿನಾಂಕ 26 (ಡಿ.2021), ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್...

ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು (ಡಿ.26): ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸೌರವ್ ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್...

Related Articles

ರಾಜ್ಯ ಸರ್ಕಾರಗಳಿಗೆ ತೆರಿಗೆ ಹಂಚಿಕೆಯ ಮುಂಗಡ ಕಂತು ಹಂಚಿಕೆ

ನವದೆಹಲಿ,(ಜ.21): ಹಣಕಾಸು ಸಚಿವಾಲಯದ ವೆಚ್ಚ ಇಲಾಖೆ, 17 ರಾಜ್ಯಗಳಿಗೆ 9,781 ಕೋಟಿ ರೂ. ತಿಂಗಳ ಬದಲಾವಣೆ ನಂತರದ ಆದಾಯ ಕೊರತೆ (ಪಿಡಿಆರ್ ಆಡಿ) ಅನುದಾನವನ್ನು ಬಿಡುಗಡೆ ಮಾಡಿದೆ. ಇದು ರಾಜ್ಯಗಳಿಗೆ ಬಿಡುಗಡೆ ಮಾಡಿದ...

ಕವಿ ಚನ್ನವೀರ ಕಣವಿ ಚಿಕಿತ್ಸಾ ವೆಚ್ಚ ಬರಿಸಲಿರುವ ಸರ್ಕಾರ : ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು,(ಜ.20): ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿ ಚನ್ನವೀರ ಕಣವಿ ಅವರ ಆಸ್ಪತ್ರೆ ವೆಚ್ಚ ವನ್ನು ಸರ್ಕಾರದ ವತಿಯಿಂದ ಭರಿಸಲು ನಿರ್ಧರಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಕಣವಿ ಅವರು ಜನವರಿ 14 ರಂದು...

ಮಂಡ್ಯ : ಶೆಲ್ ತಯರಿಕ ಕಂಪನಿಯಲ್ಲಿ 39 ಜನರಿಗೆ ಕೋರೊನ

ಮಂಡ್ಯ (ಜ.21): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮಂಡ್ಯ ಜಿಲ್ಲೆಯ ಶೆಲ್ ತಯಾರಿಕಾ ಫ್ಯಾಕ್ಟರಿಯಲ್ಲಿ 39 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ...
Translate »
error: Content is protected !!