ಸತ್ಯವನ್ನು ಮುಚ್ಚಿಟ್ಟು ಸುಳ್ಳನ್ನು ವೈಭವೀಕರಿಸುವುದೇ ಕಾಂಗ್ರೆಸ್ ನ ಕೆಲಸ : ಕೆ. ಎಸ್. ಈಶ್ವರಪ್ಪ

ಶಿವಮೊಗ್ಗ: ಕೇಂದ್ರ‌ ಸರ್ಕಾರ ಕೃಷಿ ಬಗ್ಗೆ ನೂತನ ಮಸೂದೆ‌ ಜಾರಿಗೆ ತಂದಾಗ ರೈತರು ಖುಷಿಪಟ್ಟರು.ಆದರೆ ಕಾಂಗ್ರೆಸ್ ರೈತರಿಗೆ ಏನೂ ಮಾಡಿಲ್ಲ. ರೈತರು ಹೀಗೆ ಸುಳ್ಳು ಹೇಳುವವರ ಬಗ್ಗೆ ಎಚ್ಚರದಿಂದಿರಬೇಕು. ಸತ್ಯವನ್ನು ಮುಚ್ಚಿಟ್ಟು ಸುಳ್ಳನ್ನು ವೈಭವೀಕರಿಸುವುದೇ ಕಾಂಗ್ರೆಸ್ ಕೆಲಸ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅವರು, ಭಾರತದ ರಕ್ಷಣಾ ವ್ಯವಸ್ಥೆ ಬಲಪಡಿಸಲು ರಫೆಲ್ ಒಪ್ಪಂದ ಮಾಡಿಕೊಂಡಾಗ ಕಾಂಗ್ರೆಸ್ ಇದೊಂದು ದೊಡ್ಡ‌ ಹಗರಣ ಎಂದು ಆಪಾದಿಸಿತ್ತು. ಹಗರಣ ಸುಳ್ಳು ಎಂದು ಸುಪ್ರೀಂ ಕೋರ್ಟ್ ಹೇಳಿದ ನಂತರ ಕಾಂಗ್ರೆಸ್ ಬಾಯಿ ಮುಚ್ಚಿಕೊಂಡಿತು. ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಾಗ ಅಲ್ಪ ಸಂಖ್ಯಾತರಿಗೆ ಬಿಜೆಪಿ ಅನ್ಯಾಯ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಬಿಂಬಿಸಿತು.

ಆದರೆ ಬಿಜೆಪಿ ಹಿಂದು ಮುಸ್ಲಿಂ ಕ್ರೈಸ್ತರು ಒಂದೇ ಪೌರತ್ವದಲ್ಲಿ ಬದುಕಲಿ ಎಂಬ ಕಾರಣದಿಂದ ಮಸೂದೆ ಜಾರಿಗೆ ತರಲಾಗಿದೆ ಎಂದು ಗೊತ್ತಾದ ಬಳಿಕ ಕಾಂಗ್ರೆಸ್ ಬಾಯಿ ಮುಚ್ಚಿಕೊಂಡಿದೆ. ಇದೇ ರೀತಿ ಬರೀ ಸುಳ್ಳು ಹೇಳುವುದೇ ಕಾಂಗ್ರೆಸ್ ಕೆಲಸ ಕೃಷಿ ಮಸೂದೆಯ ಬಗ್ಗೆ ಕಾಂಗ್ರೆಸ್ ಪಕ್ಷ ಹೇಳುತ್ತಿರುವ ಸುಳ್ಳನ್ನು ರೈತರು ನಂಬಬಾರದು.ರಾಜ್ಯದಲ್ಲೂ ಕೃಷಿ ಮಸೂದೆ ತಂದಾಗ ಇಲ್ಲಿಯೂ ಯಡಿಯೂರಪ್ಪ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಕೆ.ಎಸ್ ಈಶ್ವರಪ್ಪ ಕಿಡಿ ಕಾರಿದರು.

Hot Topics

ರಾಜ್ಯದಲ್ಲಿ ಮೇ 10 ರಿಂದ ಮೇ 24ರವರೆಗೆ ಲಾಕ್’ಡೌನ್

ಬೆಂಗಳೂರು: ಕರ್ನಾಟಕದಲ್ಲಿ ಮೇ 10 ರಿಂದ ಮೇ 24 ವರೆಗೆ ಲಾಕ್'ಡೌನ್ ವಿಧಿಸಲಾಗಿದೆ.ಲಾಕ್'ಡೌನ್ ಸಂದರ್ಭದಲ್ಲಿ ಬೆಳಿಗ್ಗೆ 6-10 ಗಂಟೆಯವರೆಗೆ ಅಗತ್ಯ ವಸ್ತುಗಳಿಗೆ ಅವಕಾಶವಿದೆ. ನಂತರ ಯಾರು ಕೂಡ ರಸ್ತೆಗೆ ಇಳಿಯುವಂತಿಲ್ಲವೆಂದು ಹೇಳಿದ್ದಾರೆ.ಸೋಮವಾರದಿಂದ...

ಉಡುಪಿಯಲ್ಲಿ ಇಂದು 1526 ಮಂದಿಗೆ ಕೋರೊನಾ ಪಾಸಿಟಿವ್, ಐದು ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಇಂದು ಒಟ್ಟು 1526 ಮಂದಿಗೆ ಕೋರೊನಾ ಪಾಸಿಟಿವ್ ಆಗಿದೆ. ಇಂದಿನ ವರದಿಯಂತೆ ಐದು ಮಂದಿ ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ ಪ್ರಸ್ತುತ 5063 ಸಕ್ರಿಯ ಪ್ರಕರಣಗಳಿವೆ. 384 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ‌. ಜಿಲ್ಲೆಯಲ್ಲಿ...

ಉಡುಪಿಯಲ್ಲಿ ಸಂಪೂರ್ಣ ಲಾಕ್’ಡೌನ್ ಮಾಡಿ – ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಜನತಾ ಲಾಕ್‌ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತೆ. ಕಳೆದ ವರ್ಷದಂತೆ ಸಂಪೂರ್ಣ ಲಾಕ್‌ಡೌನ್‌ ಮಾಡಿ, ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ...

Related Articles

ಛೋಟ ರಾಜನ್ ಮೃತಪಟ್ಟಿಲ್ಲ – ಏಮ್ಸ್ ಸ್ಪಷ್ಟನೆ

ನವದೆಹಲಿ: ಭೂಗತ ಪಾತಕಿ ಛೋಟಾ ರಾಜನ್ ಸತ್ತಿಲ್ಲ, ಜೀವಂತವಾಗಿರುವುದಾಗಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಛೋಟಾ ರಾಜನ್ ಅವರು ಶುಕ್ರವಾರ ಕೋವಿಡ್ ಸಾಂಕ್ರಾಮಿಕ ರೋಗದಿಂದ ಮೃತಪಟ್ಟಿರುವ...

ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ – ಬಿಜೆಪಿ ಶಾಸಕ ಉದಯ್ ಗರುಡಾಚಾರ್

ಬೆಂಗಳೂರು: ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಹೇಳಿದ್ದಾರೆ.ಕೋವಿಡ್ ಹಾಸಿಗೆ ಬ್ಲಾಕಿಂಗ್ ವಿಚಾರದಲ್ಲಿ ಸಂಸದ ತೇಜಸ್ವಿ ಸೂರ್ಯ...

ರಾಜ್ಯದಲ್ಲಿ ಲಾಕ್’ಡೌನ್: ನೂತನ ಮಾರ್ಗಸೂಚಿಗಳು ಏನೇನು – ಸಂಪೂರ್ಣ ವಿವರ

ಬೆಂಗಳೂರು: ರಾಜ್ಯದಲ್ಲಿ COVID 19 ಪ್ರಸರಣದ ಸರಪಳಿಯನ್ನು ಮುರಿಯಲು ನೂತನ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ.ಮೇ 10-24 ವರೆಗೆ ಸಂಪೂರ್ಣ ಲಾಕ್'ಡೌನ್ ಇರಲಿದ್ದು ಈ ಕೆಳಗಿನ ಮಾರ್ಗಸೂಚಿಗಳು ಕಡ್ಡಾಯವಾಗಿ ಜಾರಿಯಾಗಲಿದೆ.(ಆದೇಶ ಸಂಖ್ಯೆ ಆರ್ಡಿ 158...
Translate »
error: Content is protected !!