ರಾಯಚೂರು: ಕೆರೆಗೆ ವಿಷ ಹಾಕಿರುವ ಶಂಕೆ ಲಕ್ಷಾಂತರ ಮೀನುಗಳು ಸಾವು

ರಾಯಚೂರು (ಅ.10): ಮೀನುಗಾರಿಕೆಯನ್ನೇ ನಂಬಿ ಬದುಕುತ್ತಿದ್ದ ನೂರಾರು ಕುಟುಂಬಗಳ ಆದಾಯಕ್ಕೆ ದುಷ್ಕರ್ಮಿಗಳು ಕೊಳ್ಳಿ ಇಟ್ಟ ಪರಿಣಾಮ ಕೆರೆಯಲ್ಲಿನ ಲಕ್ಷಾಂತರ ಮೀನುಗಳು ರಾತ್ರೋರಾತ್ರಿ ಸಾವನ್ನಪ್ಪಿವೆ.

ರಾಯಚೂರಿನ ಮೀನುಗಾರರು ಈಗ ಕಣ್ಣೀರಲ್ಲೆ ಕೈ ತೊಳೆಯುವಂತಾಗಿದೆ. ರಾಯಚೂರು ತಾಲೂಕಿನ ಕಟ್ಲಾಟಕೂರ್ ಕೆರೆಯನ್ನು ನಂಬಿ ಇಲ್ಲಿನ 150 ಕುಟುಂಬಗಳು ಬದುಕುತ್ತಿವೆ. ಯಾರೋ ದುಷ್ಕರ್ಮಿಗಳ ಈ ಕೃತ್ಯ ಎಸಗಿದ್ದು ಕೆರೆಯಲ್ಲಿನ 5 ಲಕ್ಷಕ್ಕೂ ಹೆಚ್ಚು ಮೀನುಗಳು ಮೃತಪಟ್ಟಿವೆ. 350 ಎಕರೆ ಪ್ರದೇಶದ ಕೆರೆ ಈ ವರ್ಷ ಸತತವಾಗಿ ಸುರಿದ ಮಳೆಯಿಂದ ಸಂಪೂರ್ಣ ತುಂಬಿತ್ತು. ಹೀಗಾಗಿ, ಮೀನುಗಾರರು ಒಳ್ಳೆಯ ಲಾಭದ ನಿರೀಕ್ಷೆಯಲ್ಲಿದ್ದರು.
ಆದರೆ ಒಂದು ರಾತ್ರಿ ಕಳೆಯುವುದರೊಳಗೆ ಲಕ್ಷಾಂತರ ಮೀನುಗಳ ಮಾರಣಹೋಮ ನಡೆದಿದೆ.

ಮೂರು ತಿಂಗಳ ಕೆಳಗೆ ಆಂಧ್ರಪ್ರದೇಶದ ಕಾಕಿನಾಡದಿಂದ ಕಟ್ಲಾ, ರೂಹು, ಮೃಗಲಾ ಸೇರಿ ನಾನಾ ತಳಿಯ 5 ಲಕ್ಷಕ್ಕೂ ಅಧಿಕ ಮೀನಿನ ಮರಿಗಳನ್ನು ತಂದು ಕೆರೆಗೆ ಬಿಡಲಾಗಿತ್ತು. ಇನ್ನೂ ಮೂರು ತಿಂಗಳು ಕಳೆದಿದ್ದರೆ ಮೀನುಗಾರರಿಗೆ ಫಸಲು ಕೈ ಸೇರುತ್ತಿತ್ತು. ಅಷ್ಟರಲ್ಲೇ ಈ ಅವಾಂತರ ನಡೆದಿದೆ. ಗುಂಜಳ್ಳಿಯ ಗಂಗಾಮತಸ್ಥರ ಮೀನುಗಾರರ ಸಹಕಾರ ಸಂಘದ ಅಡಿಯಲ್ಲಿ 150 ಕುಟುಂಬಗಳು ಬಂಡವಾಳ ಹಾಕಿವೆ. ಈಗ ಮೀನುಗಳು ಸತ್ತಿರುವುದರಿಂದ ಸುಮಾರು 25 ಲಕ್ಷ ರೂಪಾಯಿ ನಷ್ಟವಾಗಿದೆ.

Hot Topics

ರಾಜ್ಯದಲ್ಲಿ ಮೇ 10 ರಿಂದ ಮೇ 24ರವರೆಗೆ ಲಾಕ್’ಡೌನ್

ಬೆಂಗಳೂರು: ಕರ್ನಾಟಕದಲ್ಲಿ ಮೇ 10 ರಿಂದ ಮೇ 24 ವರೆಗೆ ಲಾಕ್'ಡೌನ್ ವಿಧಿಸಲಾಗಿದೆ.ಲಾಕ್'ಡೌನ್ ಸಂದರ್ಭದಲ್ಲಿ ಬೆಳಿಗ್ಗೆ 6-10 ಗಂಟೆಯವರೆಗೆ ಅಗತ್ಯ ವಸ್ತುಗಳಿಗೆ ಅವಕಾಶವಿದೆ. ನಂತರ ಯಾರು ಕೂಡ ರಸ್ತೆಗೆ ಇಳಿಯುವಂತಿಲ್ಲವೆಂದು ಹೇಳಿದ್ದಾರೆ.ಸೋಮವಾರದಿಂದ...

ಉಡುಪಿಯಲ್ಲಿ ಇಂದು 1526 ಮಂದಿಗೆ ಕೋರೊನಾ ಪಾಸಿಟಿವ್, ಐದು ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಇಂದು ಒಟ್ಟು 1526 ಮಂದಿಗೆ ಕೋರೊನಾ ಪಾಸಿಟಿವ್ ಆಗಿದೆ. ಇಂದಿನ ವರದಿಯಂತೆ ಐದು ಮಂದಿ ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ ಪ್ರಸ್ತುತ 5063 ಸಕ್ರಿಯ ಪ್ರಕರಣಗಳಿವೆ. 384 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ‌. ಜಿಲ್ಲೆಯಲ್ಲಿ...

ಉಡುಪಿಯಲ್ಲಿ ಸಂಪೂರ್ಣ ಲಾಕ್’ಡೌನ್ ಮಾಡಿ – ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಜನತಾ ಲಾಕ್‌ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತೆ. ಕಳೆದ ವರ್ಷದಂತೆ ಸಂಪೂರ್ಣ ಲಾಕ್‌ಡೌನ್‌ ಮಾಡಿ, ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ...

Related Articles

ಛೋಟ ರಾಜನ್ ಮೃತಪಟ್ಟಿಲ್ಲ – ಏಮ್ಸ್ ಸ್ಪಷ್ಟನೆ

ನವದೆಹಲಿ: ಭೂಗತ ಪಾತಕಿ ಛೋಟಾ ರಾಜನ್ ಸತ್ತಿಲ್ಲ, ಜೀವಂತವಾಗಿರುವುದಾಗಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಛೋಟಾ ರಾಜನ್ ಅವರು ಶುಕ್ರವಾರ ಕೋವಿಡ್ ಸಾಂಕ್ರಾಮಿಕ ರೋಗದಿಂದ ಮೃತಪಟ್ಟಿರುವ...

ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ – ಬಿಜೆಪಿ ಶಾಸಕ ಉದಯ್ ಗರುಡಾಚಾರ್

ಬೆಂಗಳೂರು: ಸಂಸದ ತೇಜಸ್ವಿ ಕರೆದಿದ್ದಕ್ಕೆ ನಾನು ಹೋಗಿದ್ದೆ, ಅವರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಹೇಳಿದ್ದಾರೆ.ಕೋವಿಡ್ ಹಾಸಿಗೆ ಬ್ಲಾಕಿಂಗ್ ವಿಚಾರದಲ್ಲಿ ಸಂಸದ ತೇಜಸ್ವಿ ಸೂರ್ಯ...

ರಾಜ್ಯದಲ್ಲಿ ಲಾಕ್’ಡೌನ್: ನೂತನ ಮಾರ್ಗಸೂಚಿಗಳು ಏನೇನು – ಸಂಪೂರ್ಣ ವಿವರ

ಬೆಂಗಳೂರು: ರಾಜ್ಯದಲ್ಲಿ COVID 19 ಪ್ರಸರಣದ ಸರಪಳಿಯನ್ನು ಮುರಿಯಲು ನೂತನ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ.ಮೇ 10-24 ವರೆಗೆ ಸಂಪೂರ್ಣ ಲಾಕ್'ಡೌನ್ ಇರಲಿದ್ದು ಈ ಕೆಳಗಿನ ಮಾರ್ಗಸೂಚಿಗಳು ಕಡ್ಡಾಯವಾಗಿ ಜಾರಿಯಾಗಲಿದೆ.(ಆದೇಶ ಸಂಖ್ಯೆ ಆರ್ಡಿ 158...
Translate »
error: Content is protected !!