ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಗೂಂಡಾಗಿರಿ ಮಾಡಿ ಗೆಲ್ಲುವ ಕನಸು ನನಸಾಗುವುದಿಲ್ಲ. ಹಾಗೇನಾದರೂ ಅವರು ಮಾಡಿದರೂ ನಾವು ಸುಮ್ಮನಿರುವುದಿಲ್ಲ. ಅವರ ಗೂಂಡಾ ರಾಜಕಾರಣ ಶಿರಾ, ಆರ್ ಆರ್ ನಗರ ವಿಧಾಸಭಾ ಉಪ ಚುನಾಣೆಯಲ್ಲಿ ನಡೆಯುವುದಿಲ್ಲ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಡಿ.ಕೆ ಶಿವಕುಮಾರ್ ವಿರುದ್ಧ ಕಿಡಿ ಕಾರಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಬೆಂಗಳೂರಿನ ರಾಜರಾಜೇಶ್ವರಿ ನಗರ, ಶಿರಾ ಉಪ ಚುನಾವಣೆಯಲ್ಲಿ ಗೂಂಡಾಗಿರಿ ಮೂಲಕ ಗೆಲ್ಲುವ ಪ್ರಯತ್ನ ನಡೆಸಿದ್ದಾರೆ.ಆದರೆ ಅದು ಸಾಧ್ಯವಾಗುವುದಿಲ್ಲ. ಜನರಿಗೆ ಅವರು ಏನು ಅನ್ನುವುದು ಗೊತ್ತಿದೆ. ಈಗಾಗಲೇ ಜೈಲಿಗೆ ಹೋಗಿ ಬಂದಿರುವವರಿಗೆ ಯಾರೂ ಓಟು ಹಾಕುವುದಿಲ್ಲ ಅದು ಅವರ ಭ್ರಮೆ ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕಾಗಿ ಗುದ್ದಾಟ ನಡೆಸುತ್ತಿದೆ ಅಧಿಕಾರದಲ್ಲಿ ಇದ್ದಾಗಲೂ, ಇಲ್ಲದಿರುವಾಗಲೂ ಕಾಂಗ್ರೆಸ್ ನಾಯಕರು ಬಡಿದಾಟ ಮಾಡುತ್ತಾರೆ ಇದು ಕಾಂಗ್ರೆಸ್ ಉಳಿವಿಗಾಗಿ ನಡೆಯುತ್ತಿರುವ ಚುನಾವಣೆ.ಹಾಗಾಗಿ ಅವರ ಗುದ್ದಾಟ ಬಿಜೆಪಿ ಮೇಲೆ ಏನು ಪರಿಣಾಮ ಬೀರುವುದಿಲ್ಲ ಎಂದರು.