ಮುಂಬೈ: ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡ ರಾಹುಲ್ ಶೆಟ್ಟಿಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇವರುಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ಎಂದು ತಿಳಿದು ಬಂದಿದೆ.
ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು ದುಷ್ಕರ್ಮಿಗಳು ಮೂರು ಬಾರಿ ಗುಂಡು ಹಾರಿಸಿ ಹತೈಗೈದಿದ್ದಾರೆ.
ರಾಹುಲ್ ಶೆಟ್ಟಿ ಶಿವಸೇನಾ ಸ್ಥಳೀಯ ಅಧ್ಯಕ್ಷರಾಗಿದ್ದರು. ಗುಂಡಿನ ದಾಳಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ನಂತರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪಿದ್ದಾರೆ ಎಂದು ತಿಳಿದು ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.