ಶಿವಮೊಗ್ಗ, (ಅ.26): ಮಳೆಯಿಂದಾಗಿ ನಗರದ ಹಳೇ ಜೈಲಿನ ಬಳಿ ನಿರ್ಮಿಸಲಾಗಿದ್ದ, ದಸರಾ ಉತ್ಸವದ ಬನ್ನಿ ಮಂಟಪ ಕುಸಿದು ಬಿದ್ದಿದೆ.
ಸಂಜೆ ವೇಳೆ ಸುರಿದ ಧಾರಾಕಾರ ಮಳೆಯಿಂದಾಗಿ ಬನ್ನಿ ಮಂಟಪ ಕುಸಿದು ಬಿದ್ದಿದೆ. ನವರಾತ್ರಿಯ ಕೊನೆಯ ದಿನವಾದ ಇಂದು ಹಲವು ಪೂಜೆ ಪುನಸ್ಕಾರ ನಡೆಸಲು ವ್ಯವಸ್ಥೆ ಮಾಡಿಕೊಳ್ಳಲಾಗಿತ್ತು. ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ನಂದಿ ಧ್ವಜ ತಂದು ಪೂಜೆ ಸಲ್ಲಿಸಲಾಗಿದೆ.
ಈ ಬಾರಿ ಅದ್ಧೂರಿ ಮೆರವಣಿಗೆಯನ್ನು ರದ್ದುಗೊಳಿಸಲಾಗಿದ್ದು, ಕೋಟೆ ಆಂಜನೇಯ ಸ್ವಾಮಿ ದೇವಾಲಯದಿಂದ ಹಳೇ ಜೈಲಿ ಬಳಿ ಬನ್ನಿ ಮಂಟಪಕ್ಕೆ ತೆರಳುವ ವೇಳೆ ಮಳೆ ಸುರಿಯಲು ಆರಂಭಿಸಿದೆ. ಹೀಗಾಗಿ ಕೋಟೆ ಆವರಣದಲ್ಲಿಯೇ ಸಾಂಪ್ರದಾಯಿಕವಾಗಿ ಸಾಗಿದ್ದ ಮೆರವಣಿಗೆ ಸ್ಥಗಿತಗೊಂಡಿದೆ.