ವಿದ್ಯಾರ್ಥಿವೇತನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ನಿಯೋಗ ಅಲ್ಪಸಂಖ್ಯಾತ ಇಲಾಖೆ ಕಚೇರಿಗೆ ಭೇಟಿ ನೀಡಿತು.
ಸರ್ಕಾರ ಇನ್ನೂ ಕಳೆದ ಸಾಲಿನ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದ್ಯಾರ್ಥಿವೇತನವನ್ನು ಬಿಡುಗಡೆ ಮಾಡದ ಕಾರಣ ವಿದ್ಯಾರ್ಥಿಗಳು ಶುಲ್ಕವನ್ನು ಪಾವತಿಸಲಾಗಿದೆ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ಶೀಘ್ರವೇ ವಿದ್ಯಾರ್ಥಿವೇತನವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಉಡುಪಿ ನಿಯೋಗವು ಅಲ್ಪಸಂಖ್ಯಾತ ಇಲಾಖೆಯ ಕಚೇರಿಗೆ ಭೇಟಿ ನೀಡಿ ವಿಷಯದ ಬಗ್ಗೆ ಚರ್ಚಿಸಿ, ವಿದ್ಯಾರ್ಥಿವೇತನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ನವಾಜ್ ಬ್ರಹ್ಮವರ್, ಜಿಲ್ಲಾ ಕಾರ್ಯದರ್ಶಿ ಸಫ್ವಾನ್ ಯರ್ಮಲ್, ಜಿಲ್ಲಾ ಸಮಿತಿ ಸದಸ್ಯ ಅಸೀಲ್ ಆದಿ ಉಡುಪಿ ಮತ್ತು ಅಬ್ದುಲ್ ಹನ್ನಾನ್ ಆದಿ ಉಡುಪಿ , ಅರ್ಫಾಜ್ ಆದಿ ಉಡುಪಿ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.