ಬ್ರಹ್ಮಾವರ ಪುರಸಭೆ ರಚನೆ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ರಘುಪತಿ ಭಟ್ ಸಭೆ

ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರವನ್ನು ಪುರಸಭೆಯಾಗಿ ರಚಿಸರಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವಂತೆ ಜನಸಾಂದ್ರತೆಯನ್ನು ಆದರಿಸಿ ಭೌಗೋಳಿಕ ಅಂಶಗಳನ್ನೊಳಗೊಂಡ ಸಮರ್ಪಕವಾದ ವರದಿ ರಚಿಸುವ ಕುರಿತು ಇಂದು ದಿನಾಂಕ 26-11-2020 ರಂದು ಶಾಸಕ ಶ್ರೀ ಕೆ ರಘುಪತಿ ಭಟ್ ರವರು ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಿದರು.

ಪುರಸಭೆ ರಚಿಸಲು ಇರುವ ಕಾಯ್ದೆಯಂತೆ ಜನಸಾಂದ್ರತೆಯ ಆಧಾರದಲ್ಲಿ ಬ್ರಹ್ಮಾವರ ಪುರಸಭೆ ರಚಿಸಲು ಸಾದ್ಯವಿಲ್ಲ. ಆದ್ದರಿಂದ ಪ್ರಸ್ತುತ ತಯಾರಿಸಿರುವ ನಕ್ಷೆಯನ್ನು ಮಾರ್ಪಡಿಸಿ ಜನಸಾಂದ್ರತೆಯನ್ನು ಒಳಗೊಂಡಂತೆ ಹೊಸದಾಗಿ ನಕ್ಷೆ ತಯಾರಿಸುವ ಬಗ್ಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಕರಣಿಕರು, ಸರ್ವೆ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಬ್ರಹ್ಮಾವರ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಸುಧೀರ್ ಶೆಟ್ಟಿ, ಚಾಂತಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಉದಯ ಕಾಮತ್, ವಾರಂಬಳ್ಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಜೇಶ್ ಶೆಟ್ಟಿ, ಹಾಗೂ ಸತೀಶ್ ಪೂಜಾರಿ ಮತ್ತು ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಅರುಣ ಪ್ರಭಾ, ಬ್ರಹ್ಮಾವರ ತಹಶೀಲ್ದಾರರಾದ ಕಿರಣ್ ಗೋರಯ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸಕಲ ಜೀವಾತ್ಮಗಳಿಗೆ ಪ್ರವಾದಿ ಅತ್ಯುತ್ತಮ ಮಾದರಿ:- ಕರಿ ಬಸವಶ್ರೀ

ತಾವರಗೇರಾ. ಜಮಾತೇ ಇಸ್ಲಾಮಿ ಹಿಂದ್ ವತಿಯಿಂದ ಪತ್ರಿವರ್ಷದಂತೆ ಈ ವರ್ಷವುಕೂಡ ಅಕ್ಟೂಬರ್ 17 ರಿಂದ 26 ರ ವರೆಗೆ “ಪ್ರವಾದಿ ಮಹಮ್ಮದ್ (ಸ) ಅತ್ಯುತ್ತಮ ಮಾದರಿ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ರಾಜ್ಯವ್ಯಾಪ್ತಿ ನಡೆಯುತ್ತಿರುವ...

ನಮ್ಮ ನಾಡ ಒಕ್ಕೂಟ ಉಡುಪಿ ಘಟಕ ಮತ್ತು ಮಸ್ಜಿದ್ ಎ ನೂರುಲ್ ಇಸ್ಲಾಮ್ ಆದಿಉಡುಪಿ ವತಿಯಿಂದ ಆಯುಷ್ಮಾನ್ ಕಾರ್ಡ್ ಹಾಗೂ ವಿದ್ಯಾರ್ಥಿವೇತನ ಶಿಬಿರ

ದಿನಾಂಕ 24 ಅಕ್ಟೊಬರ್ 2021, ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ ಉಡುಪಿ ತಾಲೂಕು ಘಟಕದ ವತಿಯಿಂದ...

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಿಂದ ಪಕ್ಷದ ಉಳ್ಳಾಲ ನಗರ ಸಮಿತಿ ವತಿಯಿಂದ ಸ್ಥಾಪಿಸಿದ ನಾಗರಿಕ ಸೇವಾ ಕೇಂದ್ರ ಮತ್ತು ಪಕ್ಷದ ಕಚೇರಿಯ ಉದ್ಘಾಟನೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು, ಅ. 24: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರಾದ್ಯಂತ ತನ್ನ ಪಕ್ಷಕ್ಕೆ ಸದಸ್ಯತ್ವ ಸೇರ್ಪಡೆಯ ಬೃಹತ್ ಅಭಿಯಾನವನ್ನು ಇದೇ ಕಳೆದ ಅಕ್ಟೋಬರ್ 15 ರಿಂದ ಈ ತಿಂಗಳ ಕೊನೆಯವರೆಗೂ ಅಂದರೆ ಅಕ್ಟೋಬರ್...

Related Articles

ಸಕಲ ಜೀವಾತ್ಮಗಳಿಗೆ ಪ್ರವಾದಿ ಅತ್ಯುತ್ತಮ ಮಾದರಿ:- ಕರಿ ಬಸವಶ್ರೀ

ತಾವರಗೇರಾ. ಜಮಾತೇ ಇಸ್ಲಾಮಿ ಹಿಂದ್ ವತಿಯಿಂದ ಪತ್ರಿವರ್ಷದಂತೆ ಈ ವರ್ಷವುಕೂಡ ಅಕ್ಟೂಬರ್ 17 ರಿಂದ 26 ರ ವರೆಗೆ “ಪ್ರವಾದಿ ಮಹಮ್ಮದ್ (ಸ) ಅತ್ಯುತ್ತಮ ಮಾದರಿ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ರಾಜ್ಯವ್ಯಾಪ್ತಿ ನಡೆಯುತ್ತಿರುವ...

ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ರೋಹ್‌ ಟೇ-ವೊ ನಿಧನ

ಸೋಲ್‌ (ಅ.26):ಅನಾರೋಗ್ಯದಿಂದ ಬಳಳುತ್ತಿದ್ದ ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ರೋಹ್ ಟೇ-ವೂ (88) ನಿಧನರಾಗಿದ್ದಾರೆ ಎಂದು ಸೋಲ್‌ನ ನ್ಯಾಷನಲ್ ಯುನಿವರ್ಸಿಟಿ ಆಸ್ಪತ್ರೆ ತಿಳಿಸಿದೆ.1979ರ ಮಿಲಿಟರಿ ದಂಗೆಯನ್ನು ಬೆಂಬಲಿಸಿದ್ದ ರೋಹ್‌, ಸೋಲ್‌ನಲ್ಲಿ ಸೇನಾ ವಿಭಾಗವನ್ನು...

2022 ರ ಚುನಾವಣೆ ಕುರಿತು ಚರ್ಚೆಗೆ ಕಾಂಗ್ರೆಸ್ ಅದಿನಾಯಕಿ ಸೋನಿಯಾ ಗಾಂಧಿ ಸಭೆ

ನವದೆಹಲಿ,(ಅ.26): ಮುಂಬರುವ 2022ರ ವಿಧಾನಸಭೆ ಚುನಾವಣೆಗಳ ಕುರಿತು ಚರ್ಚಿಸುವುದಕ್ಕೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಮಂಗಳವಾರ ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ ಮತ್ತು...
Translate »
error: Content is protected !!