ರೈತ ಹೋರಾಟದ ಕಿಡಿ ಸಿಡಿಸಿದ ಜಗಮೋಹನ್‌ ಸಿಂಗ್‌ ಪಟಿಯಾಲ

ಹೋರಾಟದ ಮುಖಗಳು -2

ಪಟಿಯಾಲದ ಮೂಲದ ಇವರಿಗೆ 64 ವರ್ಷ. ಕೆಲ ಕಾಲ ಸರ್ಕಾರಿ ಸೇವೆಯಲ್ಲಿದ್ದು, ಕೃಷಿಯತ್ತ ಹೊರಳಿದರು. ದೀರ್ಘ ಕಾಲ ರೈತ ಸಮಸ್ಯೆಗಳ ಪರ ದನಿಯಾಗಿ ದುಡಿದ ಈ ವ್ಯಕ್ತಿ ಇಂದು ವಿಶ್ವದೆಲ್ಲೆಡೆಯಿಂದ ಬೆಂಬಲ ಪಡೆಯುತ್ತಿರುವ ರೈತ ಹೋರಾಟಕ್ಕೆ ಇವರೇ ಚಾಲನೆ ನೀಡಿದರು.

ಇವರ ಹೆಸರು ಜಗಮೋಹನ್‌ ಸಿಂಗ್‌ ಪಟಿಯಾಲ. 64 ವರ್ಷದ ಇವರು ಒಂದು ಕಾಲದಲ್ಲಿ ಅಕ್ಯುಪಂಕ್ಚರಿಸ್ಟ್‌ ಆಗಿ ಕೆಲಸ ಮಾಡುತ್ತಿದ್ದರು. ನಂತರ ಪಂಜಾಬ್‌ ಸಹಕಾರ ಇಲಾಖೆಯಲ್ಲಿಯೂ ಸೇವೆ ಸಲ್ಲಿಸಿದ್ದರು.

ಆದರೆ ಅವರ ಮೂಲಸೆಳೆತವಿದ್ದು ಕೃಷಿಯೆಡೆಗೆ. ಭಾರತೀಯ ಕಿಸಾನ್‌ ಯೂನಿಯನ್‌ ಏಕ್ತಾದ ಸಕ್ರಿಯ ಕಾರ್ಯಕರ್ತರಾಗಿ ಹದಿನೈದು ವರ್ಷಗಳ ಕಾಲ ಶ್ರಮಿಸಿದ ಅವರು ನಂತರ ಭಾರತಿ ಕಿಸಾನ್‌ ಯೂನಿಯನ್‌ (ದಕೌಂಡ) ರಚಿಸಿ ಅದರ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

ಪಂಜಾಬಿ ರೈತರ ಪರ ಹೋರಾಟಗಳನ್ನು ಸಂಘಟಿಸುತ್ತಾ, ಕೃಷಿ ಸಮಸ್ಯೆಗಳಿ ರಾಜಕೀಯ ಪರಿಹಾರಗಳನ್ನು ಒದಗಿಸುವುದಕ್ಕೆ ಶ್ರಮಿಸುತ್ತಿದ್ದಾರೆ.

ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಾಗ ಅದನ್ನು ವಿರೋಧಿಸಿದವರು ಮತ್ತು ಪ್ರತಿಭಟಿಸಿದವರು ಜಗಮೋಹನ್‌ ಅವರು. ಆಲ್‌ ಇಂಡಿಯಾ ಕಿಸಾನ್‌ ಸಂಘರ್ಷ ಸಮನ್ವಯ ಸಮಿತಿ ಹೆಸರಿನಲ್ಲಿ ಹತ್ತು ಕೃಷಿ ಸಂಘಟನೆಗಳು ಒಟ್ಟಾಗಿ ಈ ಮೂರು ಕಾನೂನುಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಲು ನಿರ್ಧರಿಸಿದರು.

ಈ ಪ್ರಕ್ರಿಯೆಯಲ್ಲಿ 31 ರೈತ ಗುಂಪುಗಳನ್ನು ಕಿಸಾನ್‌ ಸಮಿತಿಯಡಿ ತಂದು ಸೆಪ್ಟೆಂಬರ್‌ ಹೊತ್ತಿಗೆ ಹೋರಾಟವನ್ನು ಮತ್ತಷ್ಟು ತೀವ್ರವಾಗಿಸಿದರು. ರೈತ ಸಂಘಟನೆಗಳ ನಡುವೆ ಇರುವ ಸಣ್ಣ ಭಿನ್ನಾಭಿಪ್ರಾಯಗಳಿಂದಾಗಿ ಒಡೆದು ಹೋಗಿರಬಹುದಾಗಿದ್ದ ಸಂಘಟನೆಗಳನ್ನು ಒಂದುಗೂಡಿಸಿದ್ದು ಜಗ್‌ಮೋಹನ್‌ ಅವರ ಸಂಘಟನಾ ಚಾತುರ್ಯ.

ರೈತ ಸಮಸ್ಯೆಗಳಿಗೆ ಇರಬಹುದಾದ ಏಕೈಕ ಸಮಸ್ಯೆ ರೈತ ವಿರೋಧಿ ಸರ್ಕಾರ ಎಂಬುದನ್ನು ರೈತರಿಗೆ ಮನವರಿಕೆ ಮಾಡಿಕೊಡುವ ಮೂಲಕ ಜಗಮೋಹನ್‌ ಸಿಂಗ್ ಪಟಿಯಾಲ ಅವರು ದೆಹಲಿಯ ಗಡಿಯಲ್ಲಿ ದಿನದಿನಕ್ಕೂ ರೈತ ಹೋರಾಟವನ್ನು ತೀವ್ರಗೊಳಿಸುತ್ತಿದ್ದಾರೆ.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ

Hot Topics

ಮಂಗಳೂರು: ಪೂರ್ವ ನಿಗದಿತ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ರದ್ದು

ಮಂಗಳೂರು: ನಗರದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ನಗರದಾದ್ಯಂತ ಈಗಾಗಲೇ ನಿಗದಿಯಾಗಿರುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳನ್ನು ರದ್ದುಪಡಿಸಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.ಅಲ್ಲದೆ, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ...

ಉಡುಪಿಯಾದ್ಯಂತ ಹಡಿಲು ಭೂಮಿ ಕೃಷಿ ಆಂದೋಲನ ಪಾರದರ್ಶಕವಾಗಿ ನಡೆಸಲು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ

ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಹಮ್ಮಿಕೊಂಡಿರುವ "ಹಡಿಲು ಭೂಮಿ ಕೃಷಿ ಆಂದೋಲನ"ವನ್ನು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಇಂದು ದಿನಾಂಕ 17-04-2021 ರಂದು...

ಮಣಿಪಾಲ; ತಾಯಿಯೊಂದಿಗೆ ಗಲಾಟೆ: ಬಾಲಕಿ ನಾಪತ್ತೆ: ಅಪಹರಣ ಶಂಕಿಸಿ ಪೋಷಕರಿಂದ ದೂರು

ಮಣಿಪಾಲ, ಎ.17: ಬಾಲಕಿಯೊಬ್ಬಳು ಕಳೆದ ನಾಲ್ಕು ದಿನಗಳಿಂದ ನಾಪತ್ತೆ ಯಾಗಿದ್ದು, ಆಕೆಯನ್ನು ಯಾರೋ ಯಾರೋ ಪುಸಲಾಯಿಸಿ ಕರೆದುಕೊಂಡು ಹೋಗಿರಬಹುದೆಂದು ಶಂಕಿಸಿ ಪೋಷಕರು ಮಣಿಪಾಲ ಠಾಣೆಗೆ ದೂರು ನೀಡಿದ್ದಾರೆ. ಪೆರಂಪಳ್ಳಿ ಅಂಬಡೆಬೆಟ್ಟು ನಿವಾಸಿ ಅವಿನ(16)...

Related Articles

ಮಣಿಪಾಲ; ತಾಯಿಯೊಂದಿಗೆ ಗಲಾಟೆ: ಬಾಲಕಿ ನಾಪತ್ತೆ: ಅಪಹರಣ ಶಂಕಿಸಿ ಪೋಷಕರಿಂದ ದೂರು

ಮಣಿಪಾಲ, ಎ.17: ಬಾಲಕಿಯೊಬ್ಬಳು ಕಳೆದ ನಾಲ್ಕು ದಿನಗಳಿಂದ ನಾಪತ್ತೆ ಯಾಗಿದ್ದು, ಆಕೆಯನ್ನು ಯಾರೋ ಯಾರೋ ಪುಸಲಾಯಿಸಿ ಕರೆದುಕೊಂಡು ಹೋಗಿರಬಹುದೆಂದು ಶಂಕಿಸಿ ಪೋಷಕರು ಮಣಿಪಾಲ ಠಾಣೆಗೆ ದೂರು ನೀಡಿದ್ದಾರೆ. ಪೆರಂಪಳ್ಳಿ ಅಂಬಡೆಬೆಟ್ಟು ನಿವಾಸಿ ಅವಿನ(16)...

ಲಾಲು ಪ್ರಸಾದ್ ಯಾದವ್’ಗೆ ಜಾಮೀನು ಮಂಜೂರು

ರಾಂಚಿ: ಜಾರ್ಖಂಡ್ ಹೈಕೋರ್ಟ್ ಮೇವು ಹಗರಣಕ್ಕೆ ಸಂಬಂಧಿಸಿ ಬಿಹಾರದ ಮಾಜಿ ಮುಖ್ಯಮಂತ್ರಿ, ರಾಷ್ಟ್ರೀಯ ಜನತಾ ದಳ ನಾಯಕ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಿದೆ.ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಯಾದವ್ ಡುಮ್ಕಾ...

ಈಗಿನಿಂದ ಕುಂಭಮೇಳವನ್ನು ಸಾಂಕೇತಿಕವಾಗಿ ಆಚರಿಸಿ – ಪ್ರಧಾನಿ ಮೋದಿ ಮನವಿ

ನವದೆಹಲಿ: ಕುಂಭಮೇಳವನ್ನು ಸಾಂಕೇತಿಕವಾಗಿ ಆಚರಿಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭಕ್ತರಲ್ಲಿ ವಿನಂತಿಸಿದ್ದಾರೆ. ಕುಂಭ ಮೇಳದಲ್ಲಿ ಲಕ್ಷಾಂತರ ಮಂದಿ ಭಾಗವಹಿಸುತ್ತಿದ್ದು ಕೋರೊನಾ ಹಾಟ್'ಸ್ಪಾಟಾಗಿ ಬದಲಾಗಿದೆ. ಇದರ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಇದೀಗ...
Translate »
error: Content is protected !!