ಯುವ ಜನತೆಗೆ ಸ್ವಾಮಿ ವಿವೇಕಾನಂದ ಪ್ರೇರಣೆಯಾಗಲಿ-ದಿನಕರ ಬಾಬು
ಉಡುಪಿ, ಜನವರಿ 13 : ಸ್ವಾಮಿ ವಿವೇಕಾನಂದರು ಇಂದಿನ ಯುವ ಜನರಿಗೆ ಪ್ರೇರಣೆ ಆಗಬೇಕು. ಅವರ ಚಿಂತನೆ ಮತ್ತು ಆದರ್ಶಗಳು ದೇಶದ ಯುವ ಶಕ್ತಿಗೆ ಉತ್ತೇಜನ ನೀಡಿ, ಉನ್ನತ ಸಾಧನೆ ಮಾಡಲು ನೆರವಾಗಲಿವೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದರು.
ಅವರು ಬುಧವಾರ ನಗರದ ಪುರಭವನದಲ್ಲಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜು ಉಡುಪಿ, ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ, ರಾಷ್ಟಿçÃಯ ಯುವ ದಿನ, ಮೌಲಿಕ ಶಿಕ್ಷಣ ಶಿಬಿರದ ಪ್ರಾರಂಭೋತ್ಸವ, ಸ್ವಾಮಿ ವಿವೇಕಾನಂದ ಚಿಂತನ ವೇದಿಕೆಗೆ ಚಾಲನೆ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ಮಾತನಾಡಿ, ವಿವೇಕಾನಂದರ ತತ್ವಾದರ್ಶಗಳನ್ನು, ನೈತಿಕ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ನಮ್ಮ ಭವಿಷ್ಯ಼ಕ್ಕೆ ನಾವೇ ಶಿಲ್ಪಿಯಾಗಬೇಕು. ಸ್ವಾಮಿ ವಿವೇಕಾನಂದರAತಹ ಸಂತರನ್ನು ಪಾಲಿಸಬೇಕು ಇದರಿಂದ ಸ್ಪಷ್ಟ, ಶುದ್ಧ, ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ ಮಾತನಾಡಿ, ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯು ಮಹತ್ತರವಾದ ದಿನ. ಅವರ ‘ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ’ ಎಂಬ ಘೋಷವಾಕ್ಯವನ್ನು ಯುವಕರು ಪಾಲಿಸಬೇಕು ಎಂದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಮೀನು ಮಾರಾಟ ಸಂಘದ ಅಧ್ಯಕ್ಷ ಯಶ್ಪಾಲ್ ಸುವರ್ಣ, ನಗರಸಭೆ ಅಧ್ಯೆಕ್ಷೆ ಸುಮಿತ್ರ ಆರ್ ನಾಯಕ್, ಎಮ್.ಜಿ ಎಮ್ ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ್ ನಾಯ್ಕ್ , ವಿದ್ಯಾರ್ಥಿ ಕ್ಷೇಮಾಪಾಲನಾಧಿಕಾರಿ ಡಾ. ಗಣೇಶಪ್ಪ, ಮತ್ತಿತರರು ಉಪಸ್ಥಿತರಿದ್ದರು.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಶೆಟ್ಟಿ ಸ್ವಾಗತಿಸಿ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಎನ್. ನಿತ್ಯಾನಂದ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ನೃತ್ಯನಿಕೇತನ ಕೊಡವೂರು ಕಲಾವಿದರಿಂದ “ನಾರಸಿಂಹ” ನೃತ್ಯ ರೂಪಕ ಕಾರ್ಯಕ್ರಮ ನಡೆಯಿತು.
ಎಸ್.ಎಸ್.ಎಲ್.ಸಿ ವಿಜ್ಞಾನ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ
ಉಡುಪಿ, ಜನವರಿ 13 : ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಬಲವರ್ಧನೆಗಾಗಿ ವಿಜ್ಞಾನ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮವು ಜನವರಿ 15 ರಂದು ಸಂಜೆ 5 ರಿಂದ ರಾತ್ರಿ 7 ರ ವರೆಗೆ ಉಡುಪಿಯ ಸರಕಾರಿ ಪ್ರೌಢ (ಬೋರ್ಡ್) ಶಾಲೆಯಲ್ಲಿ ನಡೆಸಲಾಗುವುದು.
ಜಿಲ್ಲೆಯ ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ಇರುವ ಕಲಿಕಾ ಸಮಸ್ಯೆಗಳಿಗೆ ದೀಪಾ ಹೆಜಮಾಡಿ ಮೊ. ಸಂಖ್ಯೆ: 8618240682, ರಜನಿ ಉಡುಪ ಮೊ.ಸಂಖ್ಯೆ: 9880784064, ವಿನೋದ ಮೊ.ಸಂಖ್ಯೆ: 9743577651, ನವ್ಯಾ ಮೊ.ಸಂಖ್ಯೆ: 9008417909, ನಾಗೇಂದ್ರ ಪೈ ಮೊ.ನಂ. 9886118891, ಮಿಲ್ಟನ ಕ್ರಸ್ಟಾ ಮೊ.ನಂ.9481144081, ನಯನಾ ಮೊ.ನಂ: 9481842173, ಉಡುಪಿ ಬಿ.ಇ.ಓ ಮೊ.ನಂ. 9480695376 ಹಾಗೂ ಪರೀಕ್ಷಾ ಸಿದ್ಧತೆ, ಮತ್ತಿತರ ಪ್ರಶ್ನೆಗಳಿಗೆ ಡಿಡಿಪಿಐ ಮೊ.ನಂ: 9448999353 ಗೆ ಕರೆ ಮಾಡಿ ಪ್ರಶ್ನೆ ಕೇಳಿ ಪರಿಹಾರ ಪಡೆಯಬಹುದು.
ಪಾಲಕರೂ, ಸಾರ್ವಜನಿಕರೂ ಸಹ ಕರೆ ಮಾಡಿ ಪರೀಕ್ಷಾ ಸಿದ್ಧತೆ ಮತ್ತಿತರ ಶೈಕ್ಷಣಿಕ ಸಮಸ್ಯೆಗಳಿಗೆ ಡಿಡಿಪಿಐ ನಂಬರ್ಗೆ ಕರೆ ಮಾಡಬಹುದು.
ಈ ವಾರದ ಫೋನ್ ಇನ್ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್ ಆಗಮಿಸಿ, ಮಕ್ಕಳ ಕರೆಗಳನ್ನು ಸ್ವೀಕರಿಸಿ, ಮಕ್ಕಳಿಗೆ ಉತ್ತಮ ಕಲಿಕೆಗೆ ಅತ್ಯುತ್ತಮ ಸಲಹೆಗಳನ್ನು ನೀಡಲಿದ್ದಾರೆ.
ಕಾರ್ಯಕ್ರಮದ ಸಂಯೋಜಕರಾದ ಡಿಡಿಪಿಐ ಎನ್.ಹೆಚ್ ನಾಗೂರ ಮತ್ತು ಉಡುಪಿ ಬಿಇಓ ಮಂಜುಳಾ ಫೋನ್ ಇನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
ದೇವಾಲಯಗಳಿಗೆ ತಸ್ತೀಕು ಅನುದಾನ ಬಿಡುಗಡೆ – ದಾಖಲೆ ಸಲ್ಲಿಸಲು ಸೂಚನೆ
ಉಡುಪಿ, ಜನವರಿ 13 : ಉಡುಪಿ, ಕಾಪು ಮತ್ತು ಬ್ರಹ್ಮಾವರ ತಾಲೂಕಿನ ದೇವಾಸ್ಥಾನಗಳಿಗೆ ವಾರ್ಷಿಕ ರೂ. 48000 ತಸ್ತೀಕು ಅನುದಾನವನ್ನು ಸರಕಾರದಿಂದ ನಿಗಧಿಪಡಿಸಲಾಗಿದ್ದು, ಬ್ಯಾಂಕ್ ಪಾಸ್ ಪುಸ್ತಕದ ಮೊದಲ ಪ್ರತಿಯನ್ನು ಹಾಗೂ ಖಾತೆಯ ವಿಧವನ್ನು ಉಡುಪಿ ತಾಲೂಕು ತಹಶೀಲ್ದಾರರ ಕಚೇರಿಗೆ ನೀಡಬೇಕು.
ದೇವಾಲಯಗಳಿಗೆ ತಸ್ತೀಕು ಮೊತ್ತ ಪಾವತಿಸಲು ಪ್ರಕಟಣೆ ಹೊರಡಿಸಿದ ಏಳು ದಿನಗಳ ಒಳಗೆ ಸಂಬAಧಪಟ್ಟ ದೇವಸ್ಥಾನಗಳ ಆಡಳಿತ ಮೊಕ್ತೇಸರರು/ ವ್ಯವಸ್ಥಾಪನಾ ಸಮಿತಿಯವರು ಬ್ಯಾಂಕ್ ಪಾಸ್ ಪುಸ್ತಕದ ಮೊದಲ ಪ್ರತಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಉಡುಪಿ ತಾಲೂಕು ಕಚೇರಿಗೆ ನೀಡಬೇಕು, ಇಲ್ಲವಾದಲ್ಲಿ ತಸ್ತೀಕು ಮೊತ್ತವನ್ನು ಪಾವತಿಸುವ ಬಗ್ಗೆ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಮತ್ತು ಇದನ್ನು ಅಂತಿಮ ನೋಟೀಸು ಎಂದು ಪರಿಗಣಿಸಲಾಗುವುದು ಎಂದು ಉಡುಪಿ ತಾಲೂಕು ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೆಡ್ಕ್ರಾಸ್ ವತಿಯಿಂದ ಪ್ರಥಮ ಚಿಕಿತ್ಸೆ ತರಬೇತಿ
ಉಡುಪಿ, ಜನವರಿ 13 : ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವು ಶನಿವಾರ ಮಣಿಪಾಲದ ಕಂಟ್ರಿ ಇನ್ ಹೋಟೆಲ್ನಲ್ಲಿ ನಡೆಯಿತು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಪ್ರಥಮ ಚಿಕಿತ್ಸೆಯನ್ನು ಪಡೆದು ಯಾವ ರೀತಿ ಜನರನ್ನು ರಕ್ಷಣೆ ಮಾಡಬಹುದು ಎಂಬ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಕಾರ್ಯದರ್ಶಿ ಕೆ. ಜಯರಾಮ್ ಆಚಾರ್ಯ ಸಾಲಿಗ್ರಾಮ, ಇವರು ರೆಡ್ ಕ್ರಾಸ್ ಸಂಸ್ಥೆಯ ಕಾರ್ಯ ಚಟುವಟಿಕೆ ಮತ್ತು ಪ್ರಥಮ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನಿರ್ದೇಶಕ ಡಾ. ರಾಮಚಂದ್ರ ಕಾಮತ್, ಅಪಘಾತಕ್ಕೊಳಗಾದವರಿಗೆ ಪ್ರಥಮ ಚಿಕಿತ್ಸೆ ನೀಡಿ, ಯಾವ ರೀತಿ ಜೀವ ರಕ್ಷಣೆ ಮಾಡಬಹುದು ಎಂಬ ಬಗ್ಗೆ ತರಬೇತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೋಟೆಲ್ನ ಪ್ರವೀಣ್ ಕುಮಾರ್ ಶರ್ಮಾ ವಹಿಸಿದ್ದರು.
ಡಿಡಿಆರ್ಸಿ ನೋಡಲ್ ಅಧಿಕಾರಿ ಅನುಷಾ ಆಚಾರ್ಯ ಹಾಗೂ ಸುನೀತಾ ಉಪಸ್ಥಿತರಿದ್ದರು. ಪ್ರಶಾಂತ್ ರೈ ಕಾರ್ಯಕ್ರಮ ನಿರೂಪಿಸಿದರು. ಕಂಟ್ರಿ ಇನ್ ಹೋಟೆಲ್ನ 50 ಕಾರ್ಮಿಕರಿಗೆ ಪ್ರಥಮ ಚಿಕಿತ್ಸಾ ತರಬೇತಿಯನ್ನು ನೀಡಲಾಯಿತು.
ರೆಡ್ಕ್ರಾಸ್ ವತಿಯಿಂದ ಕೊರೊನಾ ವಾರಿರ್ಸ್ಗೆ ಪರಿಹಾರ ಸಾಮಾಗ್ರಿ ಕಿಟ್ ವಿತರಣೆ
ಉಡುಪಿ, ಜನವರಿ 13 : ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಕೋವಿಡ್ ಸಂದರ್ಭದಲ್ಲಿ ಅತ್ಯುತ್ತಮ ಕೆಲಸ ನಿರ್ವಹಿಸಿದ ಆಸ್ಪತ್ರೆಯ ಸಿಬ್ಬಂದಿಗಳಿಗೆ ಪರಿಹಾರ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಕೋವಿಡ್-19 ಸಂದರ್ಭದಲ್ಲಿಯೂ ಜೀವದ ಹಂಗು ತೊರೆದು ಇತರರ ಜೀವವನ್ನು ಉಳಿಸಲು ಹಗಲಿರುಳು ದುಡಿದ ಸಿಬ್ಬಂದಿಗಳಿಗೆ ರೆಡ್ ಕ್ರಾಸ್ ಸಂಸ್ಥೆಯಿAದ ಕಿಟ್ ವಿತರಿಸಿ, ಅವರ ಸೇವೆಯನ್ನು ಪ್ರಶಂಸಿಸಿದರು.
ಗೌರವ ಕಾರ್ಯದರ್ಶಿ ಕೆ. ಜಯರಾಮ್ ಆಚಾರ್ಯ ಸಾಲಿಗ್ರಾಮ, ರೆಡ್ ಕ್ರಾಸ್ ಸಂಸ್ಥೆಯು ಮಾಡುತ್ತಿರುವ ಸೇವೆಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು.
ರೆಡ್ಕ್ರಾಸ್ ಆಡಳಿತ ಮಂಡಳಿ ಸದಸ್ಯರು, ಡಿಡಿಆರ್ಸಿ ಸದಸ್ಯ ಕಾರ್ಯದರ್ಶಿ ಕೆ. ಸನ್ಮತ್ ಹೆಗ್ಡೆ ಹಾಗೂ ನೋಡಲ್ ಅಧಿಕಾರಿಗಳಾದ ಅನುಷಾ ಆಚಾರ್ಯ, ಸುನೀತಾ ಉಪಸ್ಥಿತರಿದ್ದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಹೈಟೆಕ್ ಆಸ್ಪತ್ರೆ, ಪ್ರಣವ್ ಆಸ್ವತ್ರೆ ಮತ್ತು ಗೋರಟೆ ಆಸ್ವತ್ರೆಯ ಒಟ್ಟು 45 ಸಿಬ್ಬಂದಿಗಳಿಗೆ ಕಿಚನ್ ಸೆಟ್ಸ್, ಫೇಸ್ ಮಾಸ್ಕ್ ಮತ್ತು ಸೋಪುಗಳನ್ನು ವಿತರಿಸಲಾಯಿತು.
ವಿಶ್ವ ಯುವ ದಿನಾಚರಣೆ
ಉಡುಪಿ, ಜನವರಿ 13 : ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ, ದಕ್ಷಿಣ ಕನ್ನಡ, ಕೊಡಗು ಹಾಗು ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ವಿಶ್ವ ಯುವ ದಿನಾಚರಣೆಯನ್ನು ಆಚರಿಸಲಾಯಿತು.
ಮಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಸಿಂಡಿಕೇಟ್ ಅಧ್ಯಕ್ಷ ನ್ಯಾಯವಾದಿ ರವಿಚಂದ್ರ ಕಾರ್ಯಕ್ರಮ ಉದ್ಘಾಟಿಸಿದರು.
ಭಾರತೀಯ ರೆಡ್ಕ್ರಾಸ್ ದಕ್ಷಿಣ ಕನ್ನಡ ಶಾಖೆಯ ಸಭಾಪತಿ ಸಿ.ಎ. ಶಾಂತಾರಾಮ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಭಾ.ರೆ.ಸಂಸ್ಥೆ ಉಡುಪಿ ಶಾಖೆಯ ಸಭಾಪತಿ ಡಾ. ತಲ್ಲೂರು ಶಿವರಾಮ ಶೆಟ್ಟಿ, ಕೊಡಗು ಶಾಖೆಯ ಸಭಾಪತಿ ರವೀಂದ್ರ ರೈ, ಕಾಲೇಜಿನ ಪ್ರಾಂಶುಪಾಲ ಹರೀಶ್, ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್ಕ್ರಾಸ್ ನೋಡಲ್ ಆಫೀಸರ್ ಗಣಪತಿ ಗೌಡ, ಗೌರವ ಕಾರ್ಯದರ್ಶಿಗಳಾದ ಡಾ. ಪ್ರಭಾಕರ್ ಶರ್ಮ, ಕೆ. ಜಯರಾಮ ಆಚಾರ್ಯ ಸಾಲಿಗ್ರಾಮ ಉಪಸ್ಥಿತರಿದ್ದರು.
ಯುವರೆಡ್ ನೊಡಲ್ ಆಫೀಸರ್ ಸಚೇತ್ ಸುವರ್ಣ ವಂದಿಸಿದರು. ಈ ಸಂದರ್ಭದಲ್ಲಿ ಪಣಂಬೂರು ಬೀಚ್ನಲ್ಲಿ ಸಮುದ್ರದಲ್ಲಿ ಮುಳುಗುತ್ತಿರುವ ನಾಲ್ಕು ಮಂದಿಯ ಜೀವ ರಕ್ಷಿಸಿರುವ ಶಮಂತ ಕುಮಾರ್ ಅವರನ್ನು ಗೌರವಿಸಲಾಯಿತು.