ಶ್ರೀನಗರ (ಜ.13): ಶ್ರೀನಗರ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ಹಿಮದ ದಿಬ್ಬಕ್ಕೆ ಡಿಕ್ಕಿ ಹೊಡೆದಿದೆ. ಆದರೆ ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ದೆಹಲಿಯಿಂದ ಹೊರಟ ಇಂಡಿಗೋ ವಿಮಾನ ಟ್ಯಾಕ್ಸಿ ವೇ ಪಕ್ಕದಲ್ಲಿ ಸಂಗ್ರಹವಾಗಿದ್ದ ಹಿಮದ ಗುಡ್ಡೆಗೆ ಡಿಕ್ಕಿ ಹೊಡೆದಿದೆ. ಶ್ರೀನಗರ -ದೆಹಲಿ ವಿಮಾನವನ್ನು ಸ್ಥಗಿತಗೊಳಿಸಲಾಗಿದ್ದು, ಹೆಚ್ಚಿನ ಪರಿಶೀಲನೆಗಾಗಿ ಅಧಿಕಾರಿಗಳ ತಂಡ ಸ್ಥಳಕ್ಕೆ ತೆರಳಿದೆ ಎಂದು ವಿಮಾನಯಾನ ಸಚಿವಾಲಯ ತಿಳಿಸಿದೆ.
ದೆಹಲಿಯಿಂದ ಹೊರಟ ವಿಮಾನ ಶ್ರೀನಗರ ಏರ್ಪೋರ್ಟ್ ನಲ್ಲಿ ಹಿಮದ ದಿಬ್ಬಕ್ಕೆ ಡಿಕ್ಕಿ ಹೊಡೆದಿದೆ.ಪೈಲೆಟ್ ಸುರಕ್ಷಿತವಾಗಿ ವಿಮಾನ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.