ಬ್ರಿಸ್ಬೆನ್: 4ನೇ ಹಾಗೂ ನಿರ್ಣಾಯಕ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿಗಳಾದ ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಮಾರಕ ಬೌಲಿಂಗ್ ದಾಳಿ ನಡೆಸಿದ್ದು ಆಸ್ಟ್ರೇಲಿಯಾ 2ನೇ ಇನ್ನಿಂಗ್ಸ್ ನಲ್ಲಿ 294 ರನ್ ಗಳಿಗೆ ಆಲೌಟ್ ಆಗಿದೆ.
ಮೊದಲ ಇನ್ನಿಂಗ್ಸ್ ನಲ್ಲಿ 369 ರನ್ ಗಳಿಸಿದ್ದ ಆಸ್ಟ್ರೇಲಿಯಾ ಭಾರತವನ್ನು 336 ರನ್ ಗಳಿಗೆ ಕಟ್ಟಿಹಾಕಿತ್ತು. ಹೀಗಾಗಿ 54 ರನ್ ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಆಸ್ಟ್ರೇಲಿಯಾ ಟೀಂ ಇಂಡಿಯಾ ವೇಗಿಗಳ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ್ದು 294 ರನ್ ಗಳಿಗೆ ಸರ್ವಪತನ ಕಂಡಿತು.
ಆಸ್ಟ್ರೇಲಿಯಾ ಪರ ಎರಡನೇ ಇನ್ನಿಂಗ್ಸ್ ನಲ್ಲಿ ಹ್ಯಾರಿಸ್ 38, ಡೇವಿಡ್ ವಾರ್ನರ್ 48, ಲ್ಯಾಬುಸ್ಚಾಗ್ನೆ 25, ಸ್ಟೀವ್ ಸ್ಮಿತ್ 55, ಕ್ಯಾಮರೂನ್ ಗ್ರೀನ್ 37, ಟೀಮ್ ಪೈನ್ 27, ಪ್ಯಾಟ್ ಕಮ್ಮಿನ್ಸ್ ಅಜೇಯ 28 ರನ್ ಗಳಿಸಿದ್ದಾರೆ. ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಮೊಹಮ್ಮದ್ ಸಿರಾಜ್ 5, ಶಾರ್ದೂಲ್ ಠಾಕೂರ್ 4 ವಿಕೆಟ್ ಪಡೆದಿದ್ದಾರೆ.
ಸದ್ಯ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ 4 ರನ್ ಗಳಿಸಿದ್ದು ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ 5ನೇ ದಿನದಾಟವನ್ನು ಆರಂಭಿಸಲಿದ್ದಾರೆ. ಭಾರತ ನಾಲ್ಕನೇ ಪಂದ್ಯ ಗೆಲ್ಲಲು 324 ರನ್ ಬಾರಿಸಬೇಕಿದೆ.