ಶಿವಮೊಗ್ಗ (ಜ.24): ಅಕ್ರಮ ಗಣಿಗಾರಿಕೆ ನಿಲ್ಲಿಸಬೇಕು ಎಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಇಂದು ಶಿವಮೊಗ್ಗದಲ್ಲಿ ಈ ಬಗ್ಗೆ ಮಾತನಾಡಿದ ಅವರು, ತಕ್ಷಣ ಅಕ್ರಮ ಗಣಿಗಾರಿಕೆ ನಿಲ್ಲಿಸಬೇಕು. ಗಣಿಗಾರಿಕೆ ಸಕ್ರಮಗೊಳಿಸಲು ಅರ್ಜಿ ಹಾಕಿ ನಂತರ ಅನುಮತಿ ಪಡೆಯಬೇಕು. ಬೇಬಿಬೆಟ್ಟದ ಬಳಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಇದರಿಂದ ಕೆಆರ್ಎಸ್ ಡ್ಯಾಂಗೆ ಸಮಸ್ಯೆ ಆಗುತ್ತದೆ. ಅಕ್ರಮ ಗಣಿಗಾರಿಕೆ ನಿಲ್ಲಬೇಕು ಎಂದರು.
ಅಕ್ರಮವನ್ನು ಸಕ್ರಮ ಮಾಡುವ ರೀತಿ ನಾನು ಹೇಳಿಲ್ಲ. ಅಕ್ರಮ ಮಾಡುತ್ತಿರುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದೆ. ಕಾನೂನಿನ ಚೌಕಟ್ಟಿನಲ್ಲಿ ಲೈಸೆನ್ಸ್ ಕೊಡುವಂತೆ ಸೂಚನೆ ನೀಡಿದೆ. ಯಾವುದೂ ಮಾಡಿಕೊಳ್ಳುವ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಅಕ್ರಮ ನಡೆದರ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆ ಎಂದು ಹೇಳಿದರು.
ಇನ್ನು ಎಫ್ಡಿಎ-ಎಸ್ಡಿಎ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಿನ್ನೆ ರಾತ್ರಿ ಅಧಿಕಾರಿಗಳ ಜೊತೆ ಚರ್ಚಿಸಿದ್ ಅಂತಹ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇವೆ. ಸಮಗ್ರ ತನಿಖೆ ನಡೆಸಿ ಅಕ್ರಮ ನಡೆಯದಂತೆ ಕ್ರಮ ವಹಿಸಲಾಗುತ್ತದೆ ಎಂದರು.